ಆ್ಯಪ್ನಗರ

19ಕ್ಕೆ ಸರಕಾರಿ ನೌಕರರ ಜಿಲ್ಲಾ ಸಮ್ಮೆಳನ

ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಕುವೆಂಪು ರಂಗಮಂದಿರದಲ್ಲಿ ಸರಕಾರಿ ನೌಕರರ ಜಿಲ್ಲಾ ಸಮ್ಮೇಳನ, ಎನ್‌ಪಿಎಸ್‌ ಕಾರಾರ‍ಯಗಾರ ಹಾಗೂ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್‌.ಷಡಾಕ್ಷ ರಿ ಹೇಳಿದರು.

Vijaya Karnataka 16 Mar 2018, 5:00 am

ಶಿವಮೊಗ್ಗ: ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಕುವೆಂಪು ರಂಗಮಂದಿರದಲ್ಲಿ ಸರಕಾರಿ ನೌಕರರ ಜಿಲ್ಲಾ ಸಮ್ಮೇಳನ, ಎನ್‌ಪಿಎಸ್‌ ಕಾರಾರ‍ಯಗಾರ ಹಾಗೂ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್‌.ಷಡಾಕ್ಷ ರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿ, ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಉಪಸ್ಥಿತಿಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ಎಸ್‌.ಯಡಿಯೂರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಶಾಸಕ ಕೆ.ಬಿ.ಪ್ರಸನ್ನಕುಮಾರ್‌ ಆಶಯ ನುಡಿಗಳನ್ನಾಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಘದ ಅಧ್ಯಕ್ಷ ಬಿ.ಪಿ.ಮಂಜೇಗೌಡ ಹಾಗೂ ಸಾಧನೆಗೈದ ಭದ್ರಾವತಿ ತಾಲೂಕು ಹುಣಸೇಕಟ್ಟೆಯ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷ ಕಿ ಅನಿತಾ ಮೇರಿ ಅವರಿಗೆ ಸನ್ಮಾನಿಸಲಾಗುತ್ತಿದ್ದು, ಸಹಕಾರ ಇಲಾಖೆ ಕಾರ್ಯದರ್ಶಿ ಡಾ.ಸಿ.ಸೋಮಶೇಖರ ಉಪನ್ಯಾಸ ನೀಡಲಿದ್ದಾರೆ ಎಂದರು.

ಶಾಸಕರಾದ ಕಿಮ್ಮನೆ ರತ್ನಾಕರ್‌, ಶಾರದಾ ಪೂರಾರ‍ಯನಾಯ್ಕ, ಬಿ.ವೈ.ರಾಘವೇಂದ್ರ, ಅಪ್ಪಾಜಿ ಗೌಡ, ಮಧುಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯರಾದ ಆರ್‌. ಪ್ರಸನ್ನಕುಮಾರ್‌, ಎಂ.ಬಿ.ಭಾನುಪ್ರಕಾಶ್‌, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌.ಕುಮಾರ್‌, ಕಾಡಾ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಸೂಡಾ ಅಧ್ಯಕ್ಷ ಇಸ್ಮಾಯಿಲ್‌ಖಾನ್‌, ಮೇಯರ್‌ ನಾಗರಾಜ್‌ ಕಂಕಾರಿ, ಜಿಲ್ಲಾಧಿಕಾರಿ ಎಂ.ಲೋಕೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ್‌ ಖರೆ, ಜಿಪಂ ಸಿಇಓ ಡಾ.ಕೆ.ರಾಕೇಶ್‌ಕುಮಾರ್‌ ಮತ್ತಿತರ ಗಣ್ಯರು ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಎಸ್‌.ಆರ್‌. ಚಂದ್ರಪ್ಪ, ಕಾರ್ಯದರ್ಶಿ ಆರ್‌.ಮೋಹನ್‌ಕುಮಾರ್‌, ಖಜಾಂಚಿ ಐ.ಪಿ.ಶಾಂತರಾಜ್‌, ರಾಜ್ಯ ಪರಿಷತ್‌ ಸದಸ್ಯ ರಘು, ಕೇಂದ್ರ ಜಂಟಿ ಕಾರ್ಯದರ್ಶಿ ಕೆ.ಬಸವನಗೌಡ ಇದ್ದರು.

Vijaya Karnataka Web govt staff conference on 19th
19ಕ್ಕೆ ಸರಕಾರಿ ನೌಕರರ ಜಿಲ್ಲಾ ಸಮ್ಮೆಳನ

ಸಮ್ಮೇಳನದಲ್ಲಿ ಭಾಗವಹಿಸುವ ಸರಕಾರಿ ನೌಕರರಿಗೆ ಓಓಡಿ ಸೌಲಭ್ಯ, ನೆನಪಿನ ಕಾಣಿಕೆ ನೀಡಲಾಗುವುದು. ಜಿಲ್ಲೆಯ ಸರಕಾರಿ ಅಧಿಕಾರಿಗಳು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.

-ಸಿ.ಎಸ್‌.ಷಡಾಕ್ಷರಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ