ಆ್ಯಪ್ನಗರ

ಗ್ರಾ.ಪಂ. ಸದಸ್ಯನ ಮೇಲೆ ಹಲ್ಲೆ

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಗಲಾಟೆ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ನಗರ ಹೋಬಳಿ ರಾರ‍ಯವೆ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

Vijaya Karnataka 3 Jan 2019, 5:00 am
ಹೊಸನಗರ: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಗಲಾಟೆ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ನಗರ ಹೋಬಳಿ ರಾರ‍ಯವೆ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
Vijaya Karnataka Web gram panchayat member of the assault
ಗ್ರಾ.ಪಂ. ಸದಸ್ಯನ ಮೇಲೆ ಹಲ್ಲೆ


ಅಂಡಗದೋದೂರು ಗ್ರಾಮ ಪಂಚಾಯಿತಿ ಸದಸ್ಯ ಸಂಕೇತ(29) ಹಲ್ಲೆಗೆ ಒಳಗಾದವರು. ಅಂದು ಮಧ್ಯರಾತ್ರಿ ಹೊಸವರ್ಷ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ತೀರ್ಥಹಳ್ಳಿಯ ಪೂರ್ಣೇಶ, ರಾರ‍ಯವೆಯ ಸುಮಂತ, ಕೌಶಿಕ ಎಂಬುವರು ಜೋರಾಗಿ ಗಲಾಟೆ ಮಾಡತೊಡಗಿದರು. ಇದರಿಂದ ಅಕ್ಕಪಕ್ಕದವರಿಗೆ ತೊಂದರೆಯಾಗುತ್ತಿದೆ ಎಂದು ಬುದ್ದಿ ಹೇಳಿದ್ದಕ್ಕೆ ಸಂಕೇತ ಅವರ ಮೇಲೆ ಯುವಕರು ಏಕಾಏಕಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ