ಆ್ಯಪ್ನಗರ

ಹೃದಯಾಘಾತ, ಅಂಗನವಾಡಿ ಕಾರ್ಯಕರ್ತೆ ಸಾವು

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

Vijaya Karnataka 20 Aug 2019, 5:00 am
ಸೊರಬ: ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
Vijaya Karnataka Web heart attack anganwadi worker death
ಹೃದಯಾಘಾತ, ಅಂಗನವಾಡಿ ಕಾರ್ಯಕರ್ತೆ ಸಾವು


ಹೇಮಾವತಿ(56) ಮೃತಪಟ್ಟವರು. ಹೇಮಾವತಿ ಅವರು ತಾಲೂಕಿನ ಹೆಗ್ಗೋಡು ಗ್ರಾಮದವರಾಗಿದ್ದು, ಅಲ್ಲಿನ ಅಂಗನವಾಡಿ ಕಾರ್ಯಕರ್ತೆಯಾಗಿ ಸುಮಾರು 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ ಸೊರಬದಲ್ಲಿ ಏರ್ಪಡಿಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಸಭೆ ಮುಗಿಸಿಕೊಂಡು ಪಟ್ಟಣದಿಂದ ಊರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣ ಹೊರಟಿದ್ದು, ನಿಲ್ದಾಣದಿಂದ ಬಸ್‌ ಚಲಿಸುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರ ಪತಿ ದ್ಯಾವಪ್ಪ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಆಗಿ ನಿವೃತ್ತಿ ಹೊಂದಿದ್ದು, ಮಗ ಪ್ರೌಢ ಶಾಲಾ ಶಿಕ್ಷ ಕರಾಗಿದ್ದಾರೆ. ಇಬ್ಬರು ಪುತ್ರಿಯರನ್ನು ಮದುವೆಮಾಡಿಕೊಡಲಾಗಿದ್ದು, ಕುಟುಂಬ ಹಾಗೂ ಅಪರ ಅಭಿಮಾನಿಗಳನ್ನು ಅಗಲಿದ್ದಾರೆ. ಸೇವೆಯಿಂದ ಜನಾನುರಾಗಿಯಾಗಿದ್ದ ಹೇಮಾವತಿ ಅವರ ಅಗಲಿಕೆಯಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ