ಆ್ಯಪ್ನಗರ

ಶಿವಮೊಗ್ಗ ಡೈನಾಮೈಟ್ ಸ್ಫೋಟ: ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ, ಬಸವರಾಜ ಬೊಮ್ಮಾಯಿ

ಶಿವಮೊಗ್ಗ ಡೈನಾಮೈಟ್ ಸ್ಫೋಟ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ, ಕೆಲ ಹೊತ್ತಿನಲ್ಲೇ ಸಂಪೂರ್ಣ ವಿವರ ಲಭ್ಯ ಆಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಘಟನೆಯ ಕುರಿತಾಗಿ ಅವರು ಹೇಳಿಕೆ ನೀಡಿದ್ದು ಹೀಗೆ.

Vijaya Karnataka Web 22 Jan 2021, 12:25 pm
ಬೆಂಗಳೂರು: ಶಿವಮೊಗ್ಗದಲ್ಲಿ ಗುರುವಾರ ರಾತ್ರಿ ನಡೆದ ಡೈನಾಮೈಟ್ ಸ್ಫೋಟದ ಕುರಿತಾಗಿ ತನಿಖೆ ನಡೆಯುತ್ತಿದ್ದು ಪ್ರಾಥಮಿಕ ಮಾಹಿತಿ ಆಧರಿಸಿ ಕಲ್ಲು ಗಣಿಗಾರಿಕೆ ಪ್ರದೇಶದ ಮಾಲೀಕ ಹಾಗೂ ಡೈನಾಮೈಟ್‌ ಪೂರೈಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Vijaya Karnataka Web Basavaraj Bommai


ಘಟನೆಯ ಕುರಿತಾದ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭಾರೀ ಪ್ರಮಾಣದ ಡೈನಾಮೈಟ್‌ ಸ್ಫೋಟ ನಡೆದಿರುವುದು ಕಂಡುಬಂದಿದೆ. ಈಗಾಗಲೇ ಪೊಲೀಸರು ಸಂಬಂಧಪಟ್ಟವರನ್ನು ಬಂಧಿಸಿದ್ದಾರೆ. ಘಟನೆಯ ಕುರಿತಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಶಿವಮೊಗ್ಗ ಡೈನಾಮೈಟ್‌ ಬ್ಲಾಸ್ಟ್: ಮೂವರು ಅರೆಸ್ಟ್‌, ಸ್ಥಳಕ್ಕೆ ಧಾವಿಸಿದ ಬಾಂಬ್‌ ಸ್ಕ್ವಾಡ್‌!

ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾಡಳಿತ ರಕ್ಷಣಾ ಕಾರ್ಯ ನಡೆಸುತ್ತಿದೆ. ಸದ್ಯಕ್ಕೆ ಬಂದ ಮಾಹಿತಿಯ ಪ್ರಕಾರ 7 ಮಂದಿ ಮೃತಪಟ್ಟಿರುವುದು ಅಧಿಕೃತಗೊಂಡಿದೆ. ಘಟನೆಯ ಬಗ್ಗೆ ಸಂಪೂರ್ಣ ಚಿತ್ರಣ ಸಿಗಲು ಸ್ವಲ್ಪ ಸಮಯಾವಕಾಶದ ಅಗತ್ಯವಿದೆ. ಘಟನೆ ನಡೆದ ಪ್ರದೇಶವನ್ನು ಸಂಪೂರ್ಣ ತಪಾಸಣೆ ಮಾಡಿದ ಬಳಿಕ ಮತ್ತಷ್ಟು ಮಾಹಿತಿ ದೊರಕಲಿದೆ ಎಂದು ತಿಳಿಸಿದರು.

ಮೃತರಿಗೆ ಪರಿಹಾರ ಹಾಗೂ ಇನ್ನಿತರ ವಿಚಾರಗಳ ಕುರಿತಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಗುರುವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ 10 ರಿಂದ 10.30 ಕ್ಕೆ ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿದ್ದ ಡೈನಾಮೈಟ್‌ ಬಾಕ್ಸ್‌ಗಳನ್ನು ತುಂಬಿದ್ದ ಲಾರಿಯೊಂದು ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿಯಲ್ಲಿದ್ದ ಬಿಹಾರ ಮೂಲದ ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ