ಆ್ಯಪ್ನಗರ

ಶಿವಮೊಗ್ಗದೊಂದಿಗೆ ಭಾವನಾತ್ಮಕ ಸಂಬಂಧ ಇದೆ: ಡಿಸಿಎಂ ಡಾ. ಅಶ್ವತ್ಥ ನಾರಾಯಣ

ದೇಶದಲ್ಲೇ ಮೊದಲ ಬಾರಿಗೆ ಇನ್ನೋವೇಶನ್ ಪ್ರಾಧಿಕಾರ ಅಸ್ತಿತ್ವಕ್ಕೆ ತಂದಿದ್ದಾಗಿ ಹೇಳಿದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ, ಪ್ರಸ್ತುತ ಇರುವ ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಲು ಸರಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು.

Vijaya Karnataka Web 13 Feb 2020, 1:25 pm
ಶಿವಮೊಗ್ಗ: ನಾನು ಹೈಸ್ಕೂಲ್‍ನಿಂದ ದ್ವಿತೀಯ ಪಿಯುಸಿವರೆಗೆ ಓದಿದ್ದು, ಶಿವಮೊಗ್ಗದಲ್ಲಿ. ಇಲ್ಲಿನ ಡಿವಿಎಸ್ ಮತ್ತು ನ್ಯಾಷನಲ್ ಕಾಲೇಜಿನಲ್ಲಿ ಐದು ವರ್ಷಗಳ ಕಾಲ ವ್ಯಾಸಂಗ ಮಾಡಿದ್ದು, ಶಿವಮೊಗ್ಗದ ಬಗ್ಗೆ ಹಲವು ಮಧುರ ನೆನಪುಗಳು ಇವೆ. ಹಾಗೆ, ನನ್ನ ತಂದೆಯವರು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾರಣ ಶಿವಮೊಗ್ಗ ನಗರದ ನಂಟು ಬೆಳೆಯಿತು ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹೇಳಿಕೊಂಡಿದ್ದಾರೆ.
Vijaya Karnataka Web ashwath narayan toi


ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಇನ್ನೋವೇಶನ್ ಪ್ರಾಧಿಕಾರ ಜಾರಿಗೆ
ಇನ್ನು, ದೇಶದಲ್ಲೇ ಮೊದಲ ಬಾರಿಗೆ ಇನ್ನೋವೇಶನ್ ಪ್ರಾಧಿಕಾರ ಅಸ್ತಿತ್ವಕ್ಕೆ ತಂದಿದ್ದಾಗಿ ಹೇಳಿದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ, ಪ್ರಸ್ತುತ ಇರುವ ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಲು ಸರಕಾರ ಆದ್ಯತೆ ನೀಡಲಿದೆ ಎಂದೂ ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಇನ್ನೋವೇಶನ್ ಪ್ರಾಧಿಕಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಈ ಪ್ರಾಧಿಕಾರದ ಮೂಲಕ ಸಂಶೋಧನೆ ಸೇರಿದಂತೆ ಹೊಸತನದ ಪ್ರಯೋಗಗಳಿಗೆ ಎದುರಾಗುತ್ತಿದ್ದ ಕಾನೂನಾತ್ಮಕ ಅಡ್ಡಿಗಳನ್ನು ನಿವಾರಿಸಲಾಗಿದೆ. ಸಂಶೋಧನೆ ಕೈಗೊಳ್ಳುವವರಿಗೆ ಅವರ ಸಂಶೋಧನೆ ಅವಧಿಯಲ್ಲಿ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಡಿಸಿಎಂ ಹೇಳಿದರು.

ವಿಶ್ವವಿದ್ಯಾಲಯಗಳು ಜನಸ್ನೇಹಿ ತಾಣಗಳಾಗಬೇಕು: ಡಾ. ಅಶ್ವತ್ಥನಾರಾಯಣ

ಅಲ್ಲದೆ, ಹೊಸ ಅನ್ವೇಷಣೆಗಳಿಗೆ ನೆರವು ಒದಗಿಸಲಾಗುತ್ತಿದೆ. ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಿ, ಮಾರುಕಟ್ಟೆಯ ನಿರೀಕ್ಷೆಗೆ ತಕ್ಕಂತೆ ಪದವೀಧರರನ್ನು ರೂಪಿಸಲು ಪಠ್ಯಕ್ರಮ ರೂಪಿಸಲಾಗುತ್ತಿದೆ. ಕೈಗಾರಿಕೆಗಳ ನಿರೀಕ್ಷೆಗೆ ತಕ್ಕಂತೆ, ಪ್ರಾಯೋಗಿಕವಾದ ಅಂಶಗಳನ್ನು ಪಠ್ಯದಲ್ಲಿ ಸೇರಿಸಲಾಗುತ್ತಿದೆ. ಮಾರುಕಟ್ಟೆಯ ಬೇಡಿಕೆಯಂತೆ ಯುವ ಸಮೂಹಕ್ಕೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಒದಗಿಸಲಾಗುತ್ತಿದೆ. ಶಿಕ್ಷಣದ ಹಳೆಯ ಶೈಲಿಯನ್ನು ಬದಲಾಯಿಸಿ ಆಧುನಿಕ ಅಗತ್ಯಕ್ಕೆ ತಕ್ಕಂತೆ ಶಿಕ್ಷಣ ಪದ್ಧತಿ ರೂಪಿಸಲಾಗುತ್ತಿದೆ ಎಂದೂ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಉನ್ನತ ಶಿಕ್ಷಣ ಸುಧಾರಣೆಗೆ 'ಶಿಕ್ಷಣದ ವಿಷನ್ ಗ್ರೂಪ್ -2040' ಸಿದ್ಧತೆ

ವಿಶ್ವವಿದ್ಯಾಲಯಗಳಲ್ಲಿ ಕೈಗೊಳ್ಳುವ ಸಂಶೋಧನೆಗಳ ಲಾಭ ಜನಸಾಮಾನ್ಯರಿಗೆ ತಲುಪುವ ನಿಟ್ಟಿನಲ್ಲಿ ವಿವಿಗಳು ಕ್ರಮ ಕೈಗೊಳ್ಳಬೇಕು. ಯಾವುದೇ ಸಂಶೋಧನೆಗೆ ಪೇಟೆಂಟ್ ಪಡೆಯಲು ಸರಕಾರ ಆರ್ಥಿಕ ನೆರವು ಒದಗಿಸುತ್ತಿದೆ ಎಂದೂ ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಜ್ಯೋತಿ ನಿವಾಸ ಕಾಲೇಜು ಘಟನೆ: ಕಾನೂನಿನ ಬಗ್ಗೆ ಮಾಹಿತಿ ನೀಡಿದರೆ ವಿರೋಧ ಯಾಕೆ? - ಡಿಸಿಎಂ ಪ್ರಶ್ನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ