ಆ್ಯಪ್ನಗರ

ಖಾತೆ ಮಾಡಿಕೊಡಲು ಒತ್ತಾಯ

ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ ನಂ.1ರ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ವಾಸವಾಗಿರುವ ನಿವಾಸಿಗಳಿಗೆ ಖಾತೆ ಮಾಡುವ ಮತ್ತು ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕನ್ನಡಿಗರ ರಕ್ಷ ಣಾ ವೇದಿಕೆ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

Vijaya Karnataka 30 Jun 2019, 5:00 am
ಶಿವಮೊಗ್ಗ : ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ ನಂ.1ರ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ವಾಸವಾಗಿರುವ ನಿವಾಸಿಗಳಿಗೆ ಖಾತೆ ಮಾಡುವ ಮತ್ತು ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕನ್ನಡಿಗರ ರಕ್ಷ ಣಾ ವೇದಿಕೆ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
Vijaya Karnataka Web insist on accounting
ಖಾತೆ ಮಾಡಿಕೊಡಲು ಒತ್ತಾಯ


ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಕಳೆದ ಮೂರು ವರ್ಷದಿಂದ ಮನೆ ಕಟ್ಟಿಕೊಂಡು ಫಲಾನುಭವಿಗಳು ವಾಸ ಮಾಡುತ್ತಿದ್ದಾರೆ. ಆದರೆ, ಇದುವರೆಗೂ ಖಾತೆ ಮಾಡಿಕೊಟ್ಟಿಲ್ಲ. ಕೆಲವು ಕಡೆ ಪಾರ್ಕ್‌ ಜಾಗವನ್ನು ಕೂಡ ಕಬಳಿಸಲಾಗಿದೆ. ಆಶ್ರಯ ಬಡಾವಣೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಕೇಳಿಬಂದಿದೆ. ಈ ಎಲ್ಲವುಗಳ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವುದಕ್ಕಾಗಿ ಸಿಒಡಿ ತನಿಖೆಗೂ ಪ್ರಕರಣವನ್ನು ಒಪ್ಪಿಸಲಾಗಿದೆ. ಆದರೆ, ತನಿಖೆ ಹೆಸರಿನಲ್ಲಿ ಕಾಲಹರಣ ಮಾಡಲಾಗುತ್ತಿದೆಯೇ ವಿನಹ ಇದುವರೆಗೆ ಯಾರಿಗೂ ನ್ಯಾಯಸಿಕ್ಕಿಲ್ಲ. ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಒತ್ತಾಯಿಸಿದರು.

ನಕಲಿ ಹಕ್ಕುಪತ್ರ ಹಾಗೂ ಖಾತೆಗಳು ಹೆಚ್ಚಾಗಿರುವ ಬಗ್ಗೆಯೂ ಸಾಕಷ್ಟು ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಎನ್‌ಒಸಿ ಖಾತೆಗಳನ್ನು ಫಲಾನುಭವಿಗಳಿಗೆ ನೀಡಬೇಕು. ರಸ್ತೆ, ಚರಂಡಿ, ವಿದ್ಯುತ್‌ ಮುಂತಾದ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಜಾವಳ್ಳಿ ಚಂದ್ರು, ಪ್ರವೀಣ್‌, ಪವನ್‌, ಸೋಹನ್‌ ಸಿಂಗ್‌, ಶ್ರೀನಿವಾಸ್‌, ಕೆ.ಬಾಷಾ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ