ಆ್ಯಪ್ನಗರ

ಸ್ಕ್ಯಾ‌ನಿಂಗ್‌ ಸೌಲಭ್ಯ ಕಲ್ಪಿಸಲು ಒತ್ತಾಯ

ನಗರದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ ಸ್ಕ್ಯಾ‌ನಿಂಗ್‌ ಸೌಲಭ್ಯವಿಲ್ಲದೆ ತೊಂದರೆಯಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದಿಂದ ನಗರದ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

Vijaya Karnataka 7 Aug 2019, 10:07 pm
ಶಿವಮೊಗ್ಗ : ನಗರದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ ಸ್ಕ್ಯಾ‌ನಿಂಗ್‌ ಸೌಲಭ್ಯವಿಲ್ಲದೆ ತೊಂದರೆಯಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದಿಂದ ನಗರದ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
Vijaya Karnataka Web insist on facilitating scanning
ಸ್ಕ್ಯಾ‌ನಿಂಗ್‌ ಸೌಲಭ್ಯ ಕಲ್ಪಿಸಲು ಒತ್ತಾಯ


ಜಿಲ್ಲೆಯ ಏಳು ತಾಲೂಕುಗಳು ದಾವಣಗೆರೆ ಜಿಲ್ಲೆಯ ನ್ಯಾಮತಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸೇರಿದಂತೆ ನಾನಾ ಕಡೆಗಳಿಂದ ಬಡ ರೋಗಿಗಳು ಚಿಕಿತ್ಸೆಗೋಸ್ಕರ ಮೆಗ್ಗಾನ್‌ ಆಸ್ಪತ್ರೆಗೆ ಬರುತ್ತಾರೆ. ಸ್ಕ್ಯಾ‌ನಿಂಗ್‌ ಸೌಕರ್ಯವಿಲ್ಲದ್ದಕ್ಕೆ ತೊಂದರೆ ಆಗುತ್ತಿದೆ ಎಂದು ಕೇಂದ್ರದ ತಿಳಿಸಿದ್ದಾರೆ.

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೂರು ಸುಸಜ್ಜಿತ ಸ್ಕ್ಯಾ‌ನಿಂಗ್‌ ಯಂತ್ರಗಳಿವೆ. ಜತೆಗೆ, ಇಬ್ಬರು ರೇಡಿಯಾಲಜಿಸ್ಟ್‌ಗಳನ್ನು ನೇಮಕ ಮಾಡಲಾಗಿದೆ. ಆದರೆ ಅವರು ರಾಜೀನಾಮೆ ನೀಡಿದ್ದರಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ ಸ್ಕ್ಯಾ‌ನಿಂಗ್‌ ಸೌಲಭ್ಯವಿಲ್ಲದೆ ತೊಂದರೆಯಾಗಿದೆ. ಖಾಸಗಿ ಆಸ್ಪತ್ರೆಗೆ ಹೋಗಬೇಕಾದರೆ ದುಬಾರಿ ಹಣ ನೀಡಬೇಕಾದುದ್ದರಿಂದ ಬಡವರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಆದ್ಯತೆ ಮೇರೆಗೆ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಲಾಗಿದೆ.

ವಿಧಾನ ಪರಿಷತ್‌ ಮಾಜಿ ಸದಸ್ಯ ಜಿ.ಮಾದಪ್ಪ, ಅಧ್ಯಯನ ಕೇಂದ್ರದ ಪ್ರಮುಖರಾದ ಕಲ್ಲೂರು ಮೇಘರಾಜ್‌, ಹೊಳೆಮಡಿಲು ವೆಂಕಟೇಶ್‌, ಕೋಡ್ಲು ಶ್ರೀಧರ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ