ಆ್ಯಪ್ನಗರ

ಬಗರ್‌ ಹುಕುಂ ಜಮೀನಿಗೆ ಹಕ್ಕುಪತ್ರ ನೀಡಿ

ಬಗರ್‌ ಹುಕುಂ ಸಾಗುವಳಿ ಜಮೀನುಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಚೋರಡಿಯ ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 20 Nov 2019, 5:00 am
ಶಿವಮೊಗ್ಗ: ಬಗರ್‌ ಹುಕುಂ ಸಾಗುವಳಿ ಜಮೀನುಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಚೋರಡಿಯ ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web issue a record of bugar hukum land
ಬಗರ್‌ ಹುಕುಂ ಜಮೀನಿಗೆ ಹಕ್ಕುಪತ್ರ ನೀಡಿ


ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಕಳೆದ 30 ವರ್ಷಗಳಿಂದ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ, ಇದುವರೆಗೆ ಇವರಿಗೆ ಸಾಗುವಳಿ ಚೀಟಿ ನೀಡಿಲ್ಲ ಎಂದು ಆರೋಪಿಸಿದರು.

ಕೂಡಲೇ ಬಗರ್‌ ಹುಕುಂ ಜಮೀನನ್ನು ಸಕ್ರಮಗೊಳಿಸಿ, ಹಕ್ಕುಪತ್ರ ನೀಡಬೇಕು. ರೈತರಿಗಾಗಿ ಘೋಷಣೆ ಮಾಡಿರುವ ಪ್ರೋತ್ಸಾಹ ನಿಧಿಯನ್ನು ಸಣ್ಣ ಮತ್ತು ಅತಿಸಣ್ಣ ಭೂ ಹಿಡುವಳಿದಾರರಿಗೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿಪ್ರಮುಖರಾದ ಕಲಾವತಿ, ನಾಗರತ್ನ, ಸುಮಂಗಲ, ಸರಸ್ವತಿ, ನಾಗಮ್ಮ, ಕೆರೆದೇವಮ್ಮ, ಜಯಲಕ್ಷ್ಮೇ, ಗಿರಿಜ, ಸಂತೋಷ್‌, ಹನುಮಂತ, ಕೃಷ್ಣಪ್ಪ, ರಾಮಪ್ಪ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ