ಆ್ಯಪ್ನಗರ

ಗಾಂಜಾ ಬೆಳೆದ ಆರೋಪಿಗೆ ಜೈಲು

ಶುಂಠಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿಗೆ ಕಠಿಣ ಕಾರಾಗೃಹವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

Vijaya Karnataka 25 Apr 2019, 5:00 am
ಹೊಸನಗರ : ಶುಂಠಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿಗೆ ಕಠಿಣ ಕಾರಾಗೃಹವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
Vijaya Karnataka Web jail for ganja grower accused
ಗಾಂಜಾ ಬೆಳೆದ ಆರೋಪಿಗೆ ಜೈಲು


ತಾಲೂಕಿನ ಕೆರೆಜೆಡ್ಡು-ಅಡ್ಡೇರಿ ಸಮೀಪದ ಗುಬ್ಬಿಗದ ರೇಣುಕಪ್ಪ ಎಂಬಾತ ಶಿಕ್ಷೆಗೆ ಒಳಗಾದವ. ಈತ 2017ರಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಶುಂಠಿ ಬೆಳೆ ನಡುವೆ ಗಾಂಜಾ ಗಿಡಗಳನ್ನು ಬೆಳೆದಿದ್ದನು. ತೀರ್ಥಹಳ್ಳಿ ಉಪವಿಭಾಗದ ಅಬಕಾರಿ ನಿರೀಕ್ಷ ಕ ವೇಣುಗೋಪಾಲ್‌ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿ, ಆರೋಪಿ ವಿರುದ್ಧ ಎನ್‌ಡಿಪಿಎಸ್‌ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ್‌ ಅವರು ಸೋಮವಾರ ತೀರ್ಪು ನೀಡಿದ್ದು, ಆರೋಪಿಗೆ 4 ವರ್ಷಗಳ ಕಠಿಣ ಕಾರಾಗೃಹವಾಸ ಹಾಗೂ 20 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಭಿಯೋಜನೆಯ ಪರವಾಗಿ ಸರಕಾರಿ ಅಭಿಯೋಜಕ ವಿ.ಜಿ.ಯಳಗೇರಿ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ