ಆ್ಯಪ್ನಗರ

‘ಕುಂಸಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೇರಿಸಿ’

ತಾಲೂಕಿನ ಕುಂಸಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಲಾಯಿತು.

Vijaya Karnataka 20 Jul 2018, 5:00 am
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಲಾಯಿತು.
Vijaya Karnataka Web kumshi gram panchayat upgraded
‘ಕುಂಸಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೇರಿಸಿ’


ಬ್ರಿಟೀಷರ ಕಾಲದಲ್ಲೇ ಕುಂಸಿ ಗ್ರಾಮ ತಾಲೂಕಾಗಿತ್ತು. ಕಾಲಾ ನಂತರದಲ್ಲಿ ಈ ಗ್ರಾಮವು ಪುರಸಭೆಯಾಗಿ, ಮಂಡಲ ಪಂಚಾಯಿತಿ ಆಗಿ ನಂತರ ಗ್ರಾಮ ಪಂಚಾಯಿತಿ ಆಗಿ ಪರಿವರ್ತನೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸುಮಾರು 8 ಸಾವಿರ ಜನಸಂಖ್ಯೆಯುಳ್ಳ ಈ ಗ್ರಾಮವು ಪ್ರಸ್ತುತ ಪಟ್ಟಣ ಪಂಚಾಯಿತಿ ಆಗಿ ಕಾರ್ಯನಿರ್ವಹಿಸಲು ಎಲ್ಲ ಅರ್ಹತೆ ಹೊಂದಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸೌಲಭ್ಯಗಳನ್ನೂ ಹೊಂದಿರುವುದರಿಂದ ಮತ್ತು ಸ್ಥಳೀಯರ ಹಲವು ವರ್ಷಗಳ ಬೇಡಿಕೆಯೂ ಆಗಿರುವುದರಿಂದ ಕೂಡಲೇ ಕುಂಸಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿದರು. ಸಂಘಟನೆ ರಾಜ್ಯಾಧ್ಯಕ್ಷ ಆರ್‌.ಚಂದ್ರಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪ್ರಮುಖರಾದ ಸುರೇಶ್‌ಶೆಟ್ಟಿ, ಪರಶುರಾಮ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ