ಆ್ಯಪ್ನಗರ

ನಿಸಿಂಗ್‌ ಹೋಮ್‌ ನಿರ್ಮಾಣಕ್ಕೆ ಸ್ಥಳೀಯರ ವಿರೋಧ

ಇಲ್ಲಿನ ಜಯನಗರ ಬಡಾವಣೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಬಡಾವಣೆ ನಿವಾಸಿಗಳು ಭಾನುವಾರ ಒತ್ತಾಯಿಸಿದರು.

Vijaya Karnataka 3 Dec 2018, 5:00 am
ಶಿವಮೊಗ್ಗ: ಇಲ್ಲಿನ ಜಯನಗರ ಬಡಾವಣೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಬಡಾವಣೆ ನಿವಾಸಿಗಳು ಭಾನುವಾರ ಒತ್ತಾಯಿಸಿದರು.
Vijaya Karnataka Web localist against built nursing home
ನಿಸಿಂಗ್‌ ಹೋಮ್‌ ನಿರ್ಮಾಣಕ್ಕೆ ಸ್ಥಳೀಯರ ವಿರೋಧ


ವಸತಿ ಪ್ರದೇಶದಲ್ಲಿ ಅಕ್ಕ ಪಕ್ಕ ಮನೆಗಳಿದ್ದು, ಸುಮಾರು 25-30 ಅಡಿ ತಳಪಾಯ ತೋಡಲಾಗಿದೆ. ಈ ವೇಳೆ ಪಕ್ಕದ ಮನೆ ಪಾಯ ಕುಸಿದಿದ್ದು, ಇದರಿಂದ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದರು. ಜನವಸತಿ ಪ್ರದೇಶದಲ್ಲಿ ಆಸ್ಪತ್ರೆಗೆ ಅನುಮತಿ ನೀಡಿರುವುದೇ ತಪ್ಪು. ಹೀಗಾಗಿ, ಕಾಮಗಾರಿ ಅರ್ಧಕ್ಕೆ ನಿಲ್ಲಿಸಬೇಕು. ಈ ಸ್ಥಳ ಬೇಕಿದ್ದರೆ, ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳಲಿ ಎಂದು ಬಡಾವಣೆ ಮುಖಂಡರು ಆಗ್ರಹಿಸಿದ್ದಾರೆ.

ಪರಿಶೀಲಿಸಿದ ಬಳಿಕ ಕ್ರಮ:

ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು, ಅಡಿಪಾಯ ಸರಿಪಡಿಸುವಂತೆ ಸೂಚನೆ ನೀಡಿದರು. ಜತೆಗೆ, ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ, ನಿಯಮ ಉಲ್ಲಂಘನೆ ಆಗಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಹಾಗೊಂದು ವೇಳೆ ಉಲ್ಲಂಘನೆಯಾಗಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

==============

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ