ಆ್ಯಪ್ನಗರ

ವಿದ್ಯೆಯಿಂದ ಸಮಾಜ ಏಳಿಗೆ ನಾರಾಯಣ ಗುರು ಸಂದೇಶ

ಹಿಂದುಳಿದ ಸಮಾಜ ಮುನ್ನೆಲೆಗೆ ಬರಬೇಕಾದರೆ ಅದು ವಿದ್ಯೆಯಿಂದ ಮಾತ್ರ ಸಾಧ್ಯ ಎಂಬ ಸಂದೇಶವನ್ನು 150 ವರ್ಷಗಳ ಹಿಂದೆ ಬ್ರಹ್ಮರ್ಷಿ ನಾರಾಯಣ ಗುರುಗಳು ನೀಡಿದ್ದಾರೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.

Vijaya Karnataka 14 Sep 2019, 5:00 am
ಸಾಗರ: ಹಿಂದುಳಿದ ಸಮಾಜ ಮುನ್ನೆಲೆಗೆ ಬರಬೇಕಾದರೆ ಅದು ವಿದ್ಯೆಯಿಂದ ಮಾತ್ರ ಸಾಧ್ಯ ಎಂಬ ಸಂದೇಶವನ್ನು 150 ವರ್ಷಗಳ ಹಿಂದೆ ಬ್ರಹ್ಮರ್ಷಿ ನಾರಾಯಣ ಗುರುಗಳು ನೀಡಿದ್ದಾರೆ ಎಂದು ಶಾಸಕ ಎಚ್‌.ಹಾಲಪ್ಪ ಹೇಳಿದರು.
Vijaya Karnataka Web 13SGR3_46


ಇಲ್ಲಿನ ತಹಸೀಲ್ದಾರ್‌ ಕಚೇರಿಯಲ್ಲಿತಾಲೂಕು ಆಡಳಿತ ಶುಕ್ರವಾರ ಏರ್ಪಡಿಸಿದ್ದ ಬ್ರಹ್ಮರ್ಷಿ ನಾರಾಯಣ ಗುರುಗಳ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ ತೊಡೆದುಹಾಕಲು ಶಿಕ್ಷಣದ ಮಹತ್ವ ತಿಳಿಸುವ ಕೆಲಸ ಮಾಡಿದ್ದರು. ಸಮಾಜ ಸುಧಾರಕರಾದ ನಾರಾಯಣ ಗುರುಗಳ ದೂರದೃಷ್ಟಿಯಿಂದ ಅನೇಕ ಸಣ್ಣಪುಟ್ಟ ಸಮಾಜ ಅಕ್ಷರ ಕಲಿತು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು.

ನಾರಾಯಣ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಸರಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಲ್‌.ಎಂ.ಹೆಗಡೆ, ಮೇಲ್ವರ್ಗದ ಜತೆ ಸಂಘರ್ಷಕ್ಕೆ ಇಳಿಯದೆ ತಮ್ಮದೇ ಆದ ದೃಷ್ಟಿಕೋನದಲ್ಲಿಹಿಂದುಳಿದ ವರ್ಗಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯವನ್ನು ನಾರಾಯಣ ಗುರು ಕಲ್ಪಿಸುವ ಕೆಲಸ ಮಾಡಿದ್ದಾರೆ ಎಂದರು.

ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಉಪಾಧ್ಯಕ್ಷ ಅಶೋಕ ಮರಗಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಾಂತ್ಯ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಟಿ.ರಘುಪತಿ, ತಹಸೀಲ್ದಾರ್‌ ಚಂದ್ರಶೇಖರ ನಾಯ್‌್ಕ, ಪೌರಾಯುಕ್ತ ಎಸ್‌.ರಾಜು ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ