ಆ್ಯಪ್ನಗರ

ಉಪಚುನಾವಣೆ ಗೆಲುವಿನಿಂದ ಮೋದಿ ಕೈ ಬಲ

ಲೋಕಸಭಾ ಉಪಚುನಾವಣೆಯಲ್ಲಿ ಜಿಲ್ಲೆಯ ಕ್ಷೇತ್ರದ ಜನತೆ ದೇಶಭಕ್ತಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮೋದಿ ಕೈಯನ್ನು ಬಲಪಡಿಸಿದ್ದಾರೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Vijaya Karnataka 16 Nov 2018, 5:00 am
ಶಿವಮೊಗ್ಗ : ಲೋಕಸಭಾ ಉಪಚುನಾವಣೆಯಲ್ಲಿ ಜಿಲ್ಲೆಯ ಕ್ಷೇತ್ರದ ಜನತೆ ದೇಶಭಕ್ತಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮೋದಿ ಕೈಯನ್ನು ಬಲಪಡಿಸಿದ್ದಾರೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
Vijaya Karnataka Web SMR-15SMG4


ನಗರದ ಎ.ಸಿ.ಕಚೇರಿಯಲ್ಲಿ ಗುರುವಾರ ನಡೆದ ಸಂಸದರ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ ಪಕ್ಷ ಹಾಗೂ ಕಾರ್ಯಕರ್ತರು ಅತ್ಯಂತ ಆಸಕ್ತಿಯಿಂದ ಚುನಾವಣೆ ನಡೆಸಿದ್ದಾರೆ. ಬಿಜೆಪಿಯನ್ನು ಮಣಿಸಲು ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಾದಿಯಾಗಿ ಶಿವಮೊಗ್ಗಕ್ಕೆ ಬಂದು ಟೆಂಟ್‌ ಹಾಕಿದರೂ ಜನತೆ ಬಿಜೆಪಿಯನ್ನು ಕೈ ಬಿಡಲಿಲ್ಲ ಎಂದರು.

ಸಿಗಂದೂರು ಸೇತುವೆ, ವಿಐಎಸ್‌ಎಲ್‌ ಕಾರ್ಖಾನೆ ಸೇರಿದಂತೆ ಎಲ್ಲ್ಲ ಸಮಸ್ಯೆಗಳ ಬಗ್ಗೆ ಉಳಿದಿರುವ ಐದು ತಿಂಗಳಿನಲ್ಲಿ ಕೇಂದ್ರದ ಗಮನ ಸೆಳೆಯುವ ಮೂಲಕ ಅವುಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಸೋತರೂ ಸಹ ಪಾಠ ಕಲಿಯದೇ ಇರುವ ನಮ್ಮ ವಿರೋಧಿಧಿಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲೀಡ್‌ ಕಡಿಮೆಯಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಬಿಜೆಪಿಗೆ ಲೀಡ್‌ 1.5 ಲಕ್ಷಕ್ಕೂ ಹೆæಚ್ಚಿದೆ ಎಂದು ಅಭಿಪ್ರಾಯಪಟ್ಟರು.

ವಿಧಾನಪರಿಷತ್‌ ಮಾಜಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಕಚೇರಿ ಉದ್ಘಾಟಿಸಿದರು. ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌, ಶಾಸಕರಾದ ಕುಮಾರಬಂಗಾರಪ್ಪ, ಆರಗ ಜ್ಞಾನೇಂದ್ರ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ ಪ್ರಮುಖರಾದ ಡಿ.ಎಸ್‌.ಅರುಣ್‌, ಗುರುಮೂರ್ತಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ