ಆ್ಯಪ್ನಗರ

ಶಿವಮೊಗ್ಗದಲ್ಲಿ ಕೃಷಿ ಕಾನೂನುಗಳ ಪ್ರತಿ ಸುಟ್ಟು ಪ್ರತಿಭಟಿಸಿದ ರೈತ ಮುಖಂಡರು!

ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿತಂದ ಕೃಷಿ ಕಾನೂನುಗಳನ್ನ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಮಾ.26ರಂದು ಹೆದ್ದಾರಿಗಳನ್ನ ತಡೆದು ಬಂದ್ ಮಾಡುವುದಾಗಿ ಹೇಳಿದ್ದ ರೈತ ಸಂಘಟನೆಗಳ ಮುಖಂಡರು ಕೊನೆಗೆ ಪ್ರತಿಭಟನೆಯಷ್ಟೇ ಮಾಡುವುದಾಗಿ ಹೇಳಿದ್ದರು. ಅದರಂತೆ ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್. ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Vijaya Karnataka Web 26 Mar 2021, 4:45 pm
ಶಿವಮೊಗ್ಗ: ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿತಂದ ಕೃಷಿ ಕಾನೂನುಗಳನ್ನ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ನಿರಂತರ ಹೋರಾಟ ನಾಲ್ಕನೇ ತಿಂಗಳಿಗೆ ಕಾಲಿಟ್ಟಿದ್ದು ಇದರ ಅಂಗವಾಗಿ ರಾಷ್ಟ್ರಾದ್ಯಂತ ಮಾ.26ರಂದು ಬಂದ್ ಗೆ ಕರೆ ನೀಡಲಾಗಿತ್ತು.‌
Vijaya Karnataka Web ಪ್ರತಿಭಟನೆ
ಸಾಂದರ್ಭಿಕ ಚಿತ್ರ


ಹೆದ್ದಾರಿಗಳನ್ನ ತಡೆದು ಬಂದ್ ಮಾಡುವುದಾಗಿ ಹೇಳಿದ್ದ ರೈತ ಸಂಘಟನೆಗಳ ಮುಖಂಡರು ಕೊನೆಗೆ ಪ್ರತಿಭಟನೆಯಷ್ಟೇ ಮಾಡುವುದಾಗಿ ಹೇಳಿದ್ದರು. ಅದರಂತೆ ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್. ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಂತರ ಕಚೇರಿ ಮುಂಭಾಗದ ರಸ್ತೆಯಲ್ಲಿ ಕೃಷಿ ಕಾನೂನುಗಳ ಪ್ರತಿ ಹಾಗೂ ದೆಹಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದಾಖಲಾದ ಪ್ರಚೋದನಾಕಾರಿ ಭಾಷಣ ಮೊಕದ್ದಮೆ ಪ್ರತಿಗಳನ್ನು ಸುಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜಪ್ಪ, ಸಾಂಕೇತಿಕವಾಗಿ ಪ್ರತಿಗಳನ್ನ ಸುಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಮುಂದೆ ಆಡಳಿತಾರೂಢ ಬಿಜೆಪಿ ಹೀಗೆ ನಿರ್ನಾಮವಾಗಲಿದೆ. ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾನೂನುಗಳನ್ನ ಹಿಂಪಡೆಯಬೇಕು ಹಾಗೂ ರೈತ ಮುಖಂಡ ಟಿಕಾಯತ್ ಮೇಲೆ ಪೊಲೀಸರು ಹಾವೇರಿ ಹಾಗೂ ಶಿವಮೊಗ್ಗ ಠಾಣೆಗಳಲ್ಲಿ ದಾಖಲಿಸಿರುವ ಪ್ರಕರಣಗಳನ್ನ ರಾಜ್ಯ ಸರ್ಕಾರ ಕೈ ಬಿಡಬೇಕು.

ರೈತ ಶಾಲು ಹೊದ್ದು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರ ರೈತ ವಿರೋಧಿ ಧೋರಣೆ ತಾಳಬಾರದು ಎಂದು ಎಚ್ಚರಿಸಿದರು. ದಸಂಸ, ಜೆಡಿ(ಎಸ್),‌ ಕಾಂಗ್ರೆಸ್ ಕಾರ್ಯಕರ್ತರು ಇದ್ದರು. ಶಿವಮೊಗ್ಗ ಜಿಲ್ಲೆ ವಿವಿಧೆಡೆ ರೈತ ನಾಯಕರು ಹಾಗೂ ಇತರೆ ಸಂಘಟನೆಗಳ ಪ್ರಮುಖರು ಪ್ರತಿಭಟನೆ‌ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ