ಆ್ಯಪ್ನಗರ

ನವುಲೆ ಕೆರೆ ಒತ್ತುವರಿ: ನೋಟಿಸ್‌

ನಗರದ ನವುಲೆ ಕೆರೆ ಒತ್ತುವರಿ ಮಾಡಿ ಹೆದ್ದಾರಿ ನಿರ್ಮಾಣಕ್ಕೆ ಸ್ಥಳೀಯ ನಾಗರಿಕ ಹಿತರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ದೂರು ಆಧರಿಸಿ ಕಾನೂನು ಪ್ರಾಧಿಕಾರವು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಿಗೆ ನೋಟಿಸ್‌ ಜಾರಿ ಮಾಡಿದೆ.

Vijaya Karnataka 27 Apr 2019, 5:00 am
ಶಿವಮೊಗ್ಗ : ನಗರದ ನವುಲೆ ಕೆರೆ ಒತ್ತುವರಿ ಮಾಡಿ ಹೆದ್ದಾರಿ ನಿರ್ಮಾಣಕ್ಕೆ ಸ್ಥಳೀಯ ನಾಗರಿಕ ಹಿತರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ದೂರು ಆಧರಿಸಿ ಕಾನೂನು ಪ್ರಾಧಿಕಾರವು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಿಗೆ ನೋಟಿಸ್‌ ಜಾರಿ ಮಾಡಿದೆ.
Vijaya Karnataka Web notice navule canal encroachment
ನವುಲೆ ಕೆರೆ ಒತ್ತುವರಿ: ನೋಟಿಸ್‌


ಜಿಲ್ಲೆಯಲ್ಲಿ ಒತ್ತುವರಿ ಪಿಡುಗಿಗೆ ನೂರಾರು ಕೆರೆಗಳು ಬಲಿಯಾಗಿವೆ. ಉಳಿದಿಕೊಂಡಿರುವ ಬೆರೆಳೆಣಿಕೆಯಷ್ಟು ಕೆರೆಗಳಲ್ಲಿ ಒಂದಾದ ನವುಲೆ ಕೆರೆಯೂ ರಸ್ತೆ ನಿರ್ಮಾಣದ ಹೆಸರಿನಲ್ಲಿ ಬಲಿಯಾಗುತ್ತಿದೆ. ಕರೆ ಒತ್ತುವರಿಯನ್ನು ತಡೆಯಬೇಕಾದ ಕೆರೆ ಸಂರಕ್ಷಣಾ ಪ್ರಾಧಿಕಾರವೇ ಕೆರೆ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತಿದೆ. ಮೇಲಧಿಕಾರಿಗಳ ಆದೇಶದಂತೆ ಜಿಲ್ಲಾಧಿಕಾರಿಯವರು ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಿ ನಾಗರಿಕ ಹಿತ ರಕ್ಷಣಾ ವೇದಿಕೆ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿತ್ತು. ಈ ಹಿನ್ನೆಲೆ ಜಿಲ್ಲಾಧಿಕಾರಿ, ರಾಜ್ಯ ಕೆರೆ ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್‌, ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಇವರಿಗೆ ಕಾನೂನು ಪ್ರಾಧಿಕಾರ ನೋಟಿಸ್‌ ನೀಡಿದೆ. ನವುಲೆ ಗ್ರಾಮದ ಸರ್ವೆ ನ.41ರಲ್ಲಿ ಇರುವ ಕೆರೆಯನ್ನು ಅತಿಕ್ರಮಿಸಿ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ರಸ್ತೆ ನಿರ್ಮಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ ಕೇಳಿ, ಕಾಮಗಾರಿಯನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದೆ.

ಮುಗಿಯದ ಕಾಮಗಾರಿ:

ಶಿವಮೊಗ್ಗ, ಶಿಕಾರಿಪುರ, ತಡಸ ಹೆದ್ದಾರಿಯು ರಾಜ್ಯ ಹೆದ್ದಾರಿ ನಿಗಮದಿಂದ ನಿರ್ಮಾಣವಾಗುತ್ತಿದ್ದು, ಸದ್ಯ ಕಾಮಗಾರಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಸ್ತೆ ಕಾಮಗಾರಿ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸ್ಥಗಿತಗೊಳ್ಳುತ್ತಿದೆ. ಹೀಗಾಗಿ ಹಲವು ಹರ್ಷ ಕಳೆದರೂ ಕಾಮಗಾರಿ ಕುಂಟುತ್ತಾ ಸಾಗತ್ತಿದೆ. ಈ ಮಾರ್ಗವಾಗಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ರಸ್ತೆ ವಿಸ್ತರಣೆಯ ಅಗತ್ಯವಿದೆ. ಈ ಭಾಗದಲ್ಲಿ ಜೆಎನ್‌ಸಿಇ, ಕೃಷಿ ಕಾಲೇಜು ಇರುವುದರಿಂದ ಸಾಮಾನ್ಯವಾಗಿ ವಾಹನ ಸಂಚಾರ ದಟ್ಟಣೆ ಇದೆ. ಇತ್ತ ಕಾಮಗಾರಿ ವಿಳಂಬದಿಂದ ಹಲವು ಅಪಘಾತಗಳು ಸಂಭಿಸುತ್ತಿವೆ. ಹೀಗಾಗಿ ರಸ್ತೆ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ