ಆ್ಯಪ್ನಗರ

ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

ಶೈಕ್ಷ ಣಿಕ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷ ಣ ಇಲಾಖೆ, ಶಿಕ್ಷ ಣ ಸಂಸ್ಥೆ ಮುಖ್ಯಸ್ಥರು ಹೆಚ್ಚಿನ ಕಾಳಜಿ ತೋರಿಸಬೇಕು ಎಂದು ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.

Vijaya Karnataka 14 Jun 2019, 5:00 am
ಸಾಗರ: ಶೈಕ್ಷ ಣಿಕ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷ ಣ ಇಲಾಖೆ, ಶಿಕ್ಷ ಣ ಸಂಸ್ಥೆ ಮುಖ್ಯಸ್ಥರು ಹೆಚ್ಚಿನ ಕಾಳಜಿ ತೋರಿಸಬೇಕು ಎಂದು ತಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.
Vijaya Karnataka Web SMR-13SGR2


ಇಲ್ಲಿನ ಸಾಮರ್ಥ್ಯ‌ಸೌಧದಲ್ಲಿ ಗುರುವಾರ ಅಧಿಕಾರಿಗಳ ಮುಂದುವರಿದ ಮಾಸಿಕ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಶೇ. 70ಕ್ಕಿಂತ ಕಡಿಮೆ ಫಲಿತಾಂಶ ದಾಖಲಾಗಿರುವ ಪ್ರೌಢಶಾಲೆ ಮುಖ್ಯ ಶಿಕ್ಷ ಕರ ಸಂಬಳ ಮತ್ತು ಇಂಕ್ರಿಮೆಂಟ್‌ ಕಡಿತ ಮಾಡುವಂತೆ ಶಿಕ್ಷ ಣ ಇಲಾಖೆ ಉಪ ನಿರ್ದೇಶಕರಿಗೆ ತಾ.ಪಂ.ನಿಂದ ಪತ್ರ ಬರೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವಂತೆ ಯತ್ನ ಮಾಡಬೇಕು ಎಂದರು.

ಉತ್ತಮ ಫಲಿತಾಂಶ ಸಾಧಿಸಲು ತಾಲೂಕಿನ 37 ಸರಕಾರಿ ಪ್ರೌಢಶಾಲೆಗಳಿಗೆ ತಾಲೂಕು ಮಟ್ಟದ ಅಧಿಕಾರಿಯೊಬ್ಬರನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲಾಗುವುದು. ಪ್ರತಿ ತಿಂಗಳು ನೋಡಲ್‌ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷ ಣಾಧಿಕಾರಿಗಳ ನೇತೃತ್ವದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಗುಣಮಟ್ಟದ ಫಲಿತಾಂಶ ತರುವ ನಿಟ್ಟಿನಲ್ಲಿ ಸಭೆ ನಡೆಸಲಾಗುತ್ತದೆ. ಎರಡು ತಿಂಗಳಿಗೊಮ್ಮೆ ತಾ.ಪಂ. ಇಒ ನೋಡಲ್‌ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದರು.

ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ ಪಡೆದಿರುವ ಶಾಲೆ ಮುಖ್ಯಶಿಕ್ಷ ಕರನ್ನು ಸನ್ಮಾನಿಸಲಾಯಿತು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ತಾಪಂ ಇಒ ಮಂಜುನಾಥಸ್ವಾಮಿ, ನೋಡಲ್‌ ಅಧಿಕಾರಿ ಪ್ರಶಾಂತ್‌, ಕ್ಷೇತ್ರ ಶಿಕ್ಷ ಣಾಧಿಕಾರಿ ಕೆ.ಆರ್‌. ಬಿಂಬ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ