ಆ್ಯಪ್ನಗರ

13ಕ್ಕೆ ಬೆಳಗಾವಿಯಲ್ಲಿ ರೈತರ ಬೃಹತ್‌ ಪ್ರತಿಭಟನಾ ಸಭೆ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನ.13ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಬೃಹತ್‌ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎಚ್‌.ಆರ್‌.ಬಸವರಾಜಪ್ಪ ಹೇಳಿದರು

Vijaya Karnataka 11 Nov 2017, 5:00 am

ಶಿವಮೊಗ್ಗ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನ.13ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಬೃಹತ್‌ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎಚ್‌.ಆರ್‌.ಬಸವರಾಜಪ್ಪ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಖರೀದಿ ಕೇಂದ್ರ ಪ್ರಾರಂಭ ಮತ್ತು ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಂದಘಡದಿಂದ ನ.12ರಂದು ಪಾದಯಾತ್ರೆ ಹೊರಟು 13ರಂದು ಸುವರ್ಣ ಸೌಧದ ಎದುರು ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ ಎಂದರು.

ಕಬ್ಬಿನ ಬೆಲೆ ನಿಗದಿ, ಭತ್ತ, ರಾಗಿ ಇತರೆ ಬೆಳೆಗಳ ಬೆಲೆ ಕುಸಿತವಾಗಿರುವುದರಿಂದ ತಕ್ಷ ಣವೇ ಖರೀದಿ ಕೇಂದ್ರ ತೆರೆಯಬೇಕು. ಅತಿವೃಷ್ಟಿ, ಅನಾವೃಷ್ಟಿಯಂತಹ ಬೆಳೆ ನಷ್ಟಕ್ಕೆ ಪರಿಹಾರ, ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ನ.20ರಿಂದ 10 ದಿನ ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿಯಿಂದ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಬೃಹತ್‌ ರೈತರ ಸಂಸತ್‌ ಅಧಿವೇಶನ ನಡೆಯಲಿದ್ದು, ವಿವಿಧ ರಾಜ್ಯಗಳಿಂದ ಸುಮಾರು 10 ಲಕ್ಷ ಕ್ಕೂ ಹೆಚ್ಚು ರೈತರು ಭಾಗವಹಿಸುವ ನೀರೀಕ್ಷೆ ಇದೆ ಎಂದರು.

ಈ ಅಧಿವೇಶನದಲ್ಲಿ ರೈತರನ್ನು ಎಲ್ಲ ಬಗೆಯ ಸಾಲಗಳಿಂದ ಮುಕ್ತಿಗೊಳಿಸಬೇಕು. ಸ್ವಾಮಿನಾಥನ್‌ ಆಯೋಗದ ಶಿಫಾರಸಿನಂತೆ ಎಲ್ಲ ಬೆಳೆಗಳಿಗೆ ಉತ್ಪಾದನಾ ವೆಚ್ಚದ ಮೇಲೆ ಶೇ.50ರಷ್ಟು ಸೇರಿಸಿ ಪಡೆಯುವುದು ರೈತರ ಹಕ್ಕು ಎಂದು ಪರಿಗಣಿಸುವುದು, ಅದನ್ನು ಕಾನೂನು ವ್ಯವಸ್ಥೆ ಜಾರಿಗೊಳಿಸುವಂತೆ ಒತ್ತಾಯಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಇ.ಬಿ.ಜಗದೀಶ್‌, ಡಾ.ಬಿ.ಎಂ.ಚಿಕ್ಕಸ್ವಾಮಿ, ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಎಸ್‌.ಶಿವಮೂರ್ತಿ, ಅರಬಿಳಚಿ ಈಶಣ್ಣ, ಕೆ.ರಾಘವೇಂದ್ರ ಮತ್ತಿತರರು ಇದ್ದರು.

Vijaya Karnataka Web on 13 farmes protest
13ಕ್ಕೆ ಬೆಳಗಾವಿಯಲ್ಲಿ ರೈತರ ಬೃಹತ್‌ ಪ್ರತಿಭಟನಾ ಸಭೆ

ರಾಜ್ಯದ ಎಲ್ಲ ರೈತ ಸಂಘಟನೆಗಳ ರೈತರು ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ರೈಲಿನಲ್ಲಿ ನ.17ರಂದು ಸಂಜೆ 5ಕ್ಕೆ ಬೆಂಗಳೂರಿನಿಂದ ಹೊರಟು ನ.19ರ ಮಧ್ಯಾಹ್ನ ನವದೆಹಲಿ ತಲುಪಲಿದ್ದಾರೆ. ಪುನಃ 21ರ ರಾತ್ರಿ ನವದೆಹಲಿಯಿಂದ ಅದೇ ರೈಲಿನಲ್ಲಿ ಹೊರಟು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ಅಧಿವೇಶನಕ್ಕೆ ಭಾಗವಹಿಸಲಿಚ್ಛಿಸುವ ರೈತರು ನ.17ರ ಸಂಜೆ ಒಳಗಾಗಿ ಹೆಸರನ್ನು ಸಂಘದ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು.

-ಎಚ್‌.ಆರ್‌.ಬಸವರಾಜಪ್ಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ