ಆ್ಯಪ್ನಗರ

ಪಕ್ಷ ವಿರೋಧಿಗಳಿಗೆ ಕಾಂಗ್ರೆಸ್‌ನಲ್ಲಿ ಜಾಗವಿಲ್ಲ

ಪಕ್ಷದ ತತ್ವ, ಸಿದ್ದಾಂತಕ್ಕೆ ಬದ್ಧರಾಗಿ ಸಂಘಟನೆ ಮಾಡುವವರಿಗೆ ಇಲ್ಲಿ ಜಾಗವಿದೆ ಹೊರತು ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಜಾಗವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು.

Vijaya Karnataka 10 Jul 2019, 5:00 am
ಶಿವಮೊಗ್ಗ : ಪಕ್ಷದ ತತ್ವ, ಸಿದ್ದಾಂತಕ್ಕೆ ಬದ್ಧರಾಗಿ ಸಂಘಟನೆ ಮಾಡುವವರಿಗೆ ಇಲ್ಲಿ ಜಾಗವಿದೆ ಹೊರತು ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಜಾಗವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು.
Vijaya Karnataka Web SMR-9GANESH7


ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ನಗರ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಪಕ್ಷದ ಕಾರ್ಯಕರ್ತರು ತಮ್ಮ ಜವಾಬ್ದಾರಿ ಮರೆತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇಂತವರಿಗೆ ಇಲ್ಲಿ ಜಾಗ ಇಲ್ಲ. ಯಾರು ಪಕ್ಷದ ಸಂಘಟನೆಗೆ ನಿಷ್ಠೆಯಿಂದ ದುಡಿಯುತ್ತಾರೋ ಅಂತವರಿಗೆ ಮಾತ್ರ ಸ್ಥಾನವಿದೆ ಎಂದರು.

ಪಕ್ಷ ನಮಗೆ ಏನು ಮಾಡಿದೆ ಎನ್ನುವ ಮೊದಲು ನಾವು ಪಕ್ಷ ಕ್ಕೇನು ಮಾಡುತ್ತಿದ್ದೇವೆ ಎಂದು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪಕ್ಷ ವಿರೋಧಿ ಚಟುವಟಿಕೆ ಸಹಿಸುವುದಿಲ್ಲ. ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ಕಳೆದ ಲೋಕಸಭೆ, ವಿಧಾನಸಭೆ, ಪಾಲಿಕೆ ಚುನಾವಣೆಯಲ್ಲಿ ಪಕ್ಷ ಹಿನ್ನಡೆ ಅನುಭವಿಸಿದೆ. ಪಕ್ಷದ ಸಂಘಟನೆ ದುರ್ಬಲವಾಗಿರುವುದೇ ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಎಲ್ಲಿ ಸೋತ್ತಿದ್ದೇವೋ ಅಲ್ಲಿ ಪಕ್ಷ ಗೆದ್ದು ಬರಬೇಕಾದರೆ ಕಾರ್ಯಕರ್ತರ ಸಂಘಟನೆ ಪಾತ್ರ ಪ್ರಮುಖವಾಗಿದೆ. ಇದನ್ನು ಎಲ್ಲರೂ ಗಮನದಲ್ಲಿಟ್ಟುಕೊಂಡು ಸಂಘಟನೆ ಶಕ್ತಿಯನ್ನು ಇನ್ನಷ್ಟು ಬಲಗೊಳಿಸಬೇಕು ಎಂದರು.

ಮುಖಂಡ ಎಂ.ಎ.ರಮೇಶ್‌ ಹೆಗ್ಡೆ ಮಾತನಾಡಿ, ದೇಶಾಭಿಮಾನ, ಸ್ವಾಭಿಮಾನ ಎಂದು ಮೋದಿ ಸರಕಾರ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶವನ್ನು ಅಂಬಾನಿ, ಅದಾನಿಯಂತ ಶ್ರೀಮಂತರ ಕೈಗೆ ಒಪ್ಪಿಸಲು ಹುನ್ನಾರ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಯಡಿಯೂರಪ್ಪ ಹಾಗೂ ಅವರ ಮಗ ರಾಘವೇಂದ್ರ ಅವರು ಚುನಾವಣೆ ಸಂದರ್ಭ ಎಂಪಿಎಂ ಉಳಿಸಿ, ಚುನಾವಣೆ ಮುಗಿದ ಮೇಲೆ ಮುಚ್ಚಿದ್ದಾರೆ ಎಂದು ಟೀಕಿಸಿದರು.

ಅಧಿಕಾರಕ್ಕಾಗಿ ಬಿಜೆಪಿ ಮಾಡುತ್ತಿರುವ ಕುತಂತ್ರ ಬುದ್ಧಿಯನ್ನು ಪ್ರತಿ ಮನೆಗೆ ಮುಟ್ಟಿಸುವಂತ ಕೆಲಸ ಕಾರ್ಯಕರ್ತರಿಂದ ಆಗಬೇಕಿದೆ. ಮುಂದಿನ ವಿಐಎಸ್‌ಎಲ್‌ ಹಾಗೂ ಎಂಪಿಎಂ ಬಗ್ಗೆ ಬಿಜೆಪಿ ನಾಯಕರ ವರ್ತನೆ ಖಂಡಿಸಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪ್ರಮುಖರಾದ ಎಚ್‌.ಸಿ.ಯೋಗೀಶ್‌, ಶಾಮೀರ್‌, ರಾಮೇಗೌಡ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾ ಕುಮಾರಿ, ಜಿ.ಪಲ್ಲವಿ, ವಿಜಯಲಕ್ಷ್ಮಿ ಪಾಟೀಲ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ