ಆ್ಯಪ್ನಗರ

ಶಿಕ್ಷ ಕರ ವರ್ಗಾವಣೆ ವಿರೋಧಿಸಿ ಪೋಷಕರ ಪ್ರತಿಭಟನೆ

ಪಟ್ಟಣದ ಸರಕಾರಿ ಪ್ರೌಢಶಾಲೆಯ ಶಿಕ್ಷ ಕರ ವರ್ಗಾವಣೆ ವಿರೋಧಿಸಿ ಗುರುವಾರ ಎಸ್‌ಡಿಎಂಸಿ ಅಧ್ಯಕ್ಷ ರ ನೇತೃತ್ವದಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಶಾಲೆ ಮುಂಭಾಗ ದಿಢೀರ್‌ ಪ್ರತಿಭಟನೆ ನಡೆಸಿದರು.

Vijaya Karnataka 28 Jun 2019, 5:00 am
ರಿಪ್ಪನ್‌ಪೇಟೆ: ಪಟ್ಟಣದ ಸರಕಾರಿ ಪ್ರೌಢಶಾಲೆಯ ಶಿಕ್ಷ ಕರ ವರ್ಗಾವಣೆ ವಿರೋಧಿಸಿ ಗುರುವಾರ ಎಸ್‌ಡಿಎಂಸಿ ಅಧ್ಯಕ್ಷ ರ ನೇತೃತ್ವದಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಶಾಲೆ ಮುಂಭಾಗ ದಿಢೀರ್‌ ಪ್ರತಿಭಟನೆ ನಡೆಸಿದರು.
Vijaya Karnataka Web SMR-27RPT2


ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ರದ್ದುಗೊಳಿಸುವಂತೆ ಶಿಕ್ಷ ಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಎನ್‌.ಶಿವಕುಮಾರ್‌ ಮಾತನಾಡಿ, ಈ ಶಾಲೆಯಲ್ಲಿ 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 21 ಮಂದಿ ಶಿಕ್ಷ ಕರು ಕಾರ್ಯನಿರ್ವಹಿಸುತ್ತಿದ್ದರು. ಅದರಲ್ಲಿ 5 ಶಿಕ್ಷಕರನ್ನು ವರ್ಗಾವಣೆಗೊಳಿಸಲಾಗಿದೆ. ಇದರಲ್ಲಿ 3 ಜನ ಹೆಚ್ಚುವರಿ ಶಿಕ್ಷ ಕರು. ಇಂಗ್ಲಿಷ್‌ ಹಾಗೂ ಹಿಂದಿ ಭಾಷೆ ಮತ್ತು ವಿಜ್ಞಾನ ಶಿಕ್ಷ ಕರು ಹಾಗೂ ಇಬ್ಬರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ದೂರಿದರು.

ಶಾಲೆಯಲ್ಲಿ 8ರಿಂದ 10ನೇ ತರಗತಿ ವರೆಗೆ 12 ತರಗತಿಗಳು ಇದ್ದು ,ಕನ್ನಡ ಮಾಧ್ಯಮ-6, ಆಂಗ್ಲ ಮಾಧ್ಯಮ-3 ಮತ್ತು ಉರ್ದು ಮಾಧ್ಯಮ-3 ತರಗತಿಗಳು ನಡೆಯುತ್ತಿವೆ. ಹೆಚ್ಚುವರಿ ಭಾಷಾ ಶಿಕ್ಷ ಕರ ವರ್ಗಾವಣೆಯಿಂದ ವಿದ್ಯಾರ್ಥಿಗಳಿಗೆ ಪಾಠ ಸರಿಯಾಗಿ ನಡೆಯುವುದಿಲ್ಲ. ಹಾಗೇಯೆ ಇರುವ ಶಿಕ್ಷಕರು 450 ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳುವುದು ಕಠಿಣವಾಗುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವರ್ಗಾವಣೆ ರದ್ದು ಪಡಿಸದಿದ್ದರೆ ಮುಂದೆ ಪೋಷಕರು ಮತ್ತು ವಿದ್ಯಾರ್ಥಿಗಳ ಸಹಕಾರದೊಂದಿಗೆ ಶಾಲೆಗೆ ಬೀಗ ಜಡಿದು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

-----
ವ್ಯತಿರಿಕ್ತ ಪರಿಣಾಮ
ಶಿಕ್ಷ ಕರ ವರ್ಗಾವಣೆಯಿಂದ ಗುಣಾತ್ಮಕ ಶಿಕ್ಷ ಣ ಮತ್ತು ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಹೆಚ್ಚುವರಿ ಶಿಕ್ಷ ಕರ ವಗಾವಣೆ ರದ್ದು ಪಡಿಸಬೇಕು. ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷ ಣ ನೀಡಲು ಶಿಕ್ಷ ಣಾಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಮುಂದಾಗಬೇಕು.

-ಎನ್‌.ಶಿವಕುಮಾರ್‌, ಎಸ್‌ಡಿಎಂಸಿ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ