ಆ್ಯಪ್ನಗರ

‘ಕೈ’ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ

ಕಾಂಗ್ರೆಸ್‌ನ ಪ್ರಬಲ ಕೋಟೆಯಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಸ್ಪರ್ಧಿಸಲು ಅವಕಾಶ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಅಭ್ಯರ್ಥಿ ಎಸ್‌.ಉಮೇಶ್‌ ವರ್ಮ ತಿಳಿಸಿದರು.

Vijaya Karnataka 18 Apr 2019, 5:00 am
ಸಾಗರ: ಕಾಂಗ್ರೆಸ್‌ನ ಪ್ರಬಲ ಕೋಟೆಯಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಸ್ಪರ್ಧಿಸಲು ಅವಕಾಶ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಅಭ್ಯರ್ಥಿ ಎಸ್‌.ಉಮೇಶ್‌ ವರ್ಮ ತಿಳಿಸಿದರು.
Vijaya Karnataka Web SMR-17sgr5


ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 10 ತಿಂಗಳ ಹಿಂದೆಯೆ ಕಾಂಗ್ರೆಸ್‌ ವರಿಷ್ಠರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ಕಣಕ್ಕೆ ಇಳಿಸಬೇಕೆಂದು ವಿನಂತಿಸಿದ್ದೇನೆ. ಆದರೆ ಅಂತಿಮವಾಗಿ ಜೆಡಿಎಸ್‌ ಅಭ್ಯರ್ಥಿಗೆ ಸ್ಪರ್ಧಿಸಲು ಅವಕಾಶ ನೀಡಿರುವುದು ನನಗೆ ತೀವ್ರ ಬೇಸರವಾಗಿದೆ. ಈ ಸ್ಪರ್ಧೆ ಮಾಡಿರುವುದಾಗಿ ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರು ನನ್ನನ್ನು ಬೆಂಬಲಿಸಿ, ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದರು. ಕೋರಿ ರಾಜಶೇಖರ್‌, ಎಸ್‌.ಎನ್‌.ಸುಬ್ರಹ್ಮಣ್ಯ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ