ಆ್ಯಪ್ನಗರ

ಪ್ರಧಾನಿ ಘನತೆಗೆ ತಕ್ಕಂತೆ ಮಾತನಾಡಲಿ: ಡಿಕೆಶಿ

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದಾಗ ತಮ್ಮ ಘನತೆಗೆ ತಕ್ಕಂತೆ ಮಾತಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ನಿಂದನೆ ಮಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

Vijaya Karnataka 20 Apr 2019, 5:00 am
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದಾಗ ತಮ್ಮ ಘನತೆಗೆ ತಕ್ಕಂತೆ ಮಾತಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ನಿಂದನೆ ಮಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.
Vijaya Karnataka Web pm talk should be weight d k shivkumar
ಪ್ರಧಾನಿ ಘನತೆಗೆ ತಕ್ಕಂತೆ ಮಾತನಾಡಲಿ: ಡಿಕೆಶಿ


ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೋಲಿನ ಭೀತಿಯಿಂದ ಮೋದಿ ಅವರು ಈ ರೀತಿಯ ನಿಂದನೆ ಮಾಡುತ್ತಿದ್ದಾರೆ. ವೈಯಕ್ತಿಕ ನಿಂದನೆ ಮಾಡುವುದನ್ನು ಬಿಟ್ಟು ಎನ್‌ಡಿಎ ಅವಧಿಯಲ್ಲಿ ಮಾಡಿರುವ ಸಾಧನೆಯ ಪಟ್ಟಿಯನ್ನು ನೀಡಲಿ ಎಂದು ಆಗ್ರಹಿಸಿದರು.

ವೀರಶೈವ-ಲಿಂಗಾಯತ ಧರ್ಮವನ್ನು ಕಾಂಗ್ರೆಸ್‌ ಒಡೆದಿರುವುದಾಗಿ ಮೋದಿ ಅವರು ಇತ್ತೀಚೆಗೆ ಬಾಗಲಕೋಟದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಪಾದಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಕೀಳು ರಾಜಕಾರಣ ಮಾಡಲು ಮುಂದಾಗಿದ್ದಾರೆ. ಅದು ಅವರ ಸ್ಥಾನಕ್ಕೆ ಘನತೆ ತರುವುದಿಲ್ಲ. ಹೀಗಾಗಿ ಕೂಡಲೇ ಈ ಕೆಲಸ ಇಲ್ಲಿಗೆ ಕೈಬಿಡಬೇಕು ಎಂದರು.

ಅಖಿಲ ಭಾರತೀಯ ವೀರಶೈವ ಮಹಾಸಭಾದಿಂದ ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನ ನೀಡುವಂತೆ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಶ್ಯಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಮನವಿ ಮಾಡಲಾಗಿತ್ತು. ಅದನ್ನು ಕಾಂಗ್ರೆಸ್‌ ಮುಂದುವರಿಸಿದೆಯೇ ವಿನಹ ಧರ್ಮ ಒಡೆಯುವ ಕೆಲಸ ಮಾಡಿಲ್ಲ. ಇಂತಹ ಆರೋಪಗಳನ್ನು ಪ್ರಧಾನಿಯಾಗಿದ್ದುಕೊಂಡು ಮಾಡುವುದು ನಾಚಿಕೆಗೇಡು ಎಂದು ಕಿಡಿಕಾರಿದರು.

ಲಿಂಗಾಯತ ಸಮುದಾಯದವರಿಂದಲೇ ವಿರೋಧ ವ್ಯಕ್ತವಾದಾಗ ನಾನು ಸಮಾಜ ಬಾಂಧರರಿಗೆ ವೈಯಕ್ತಿಕವಾಗಿ ಕ್ಷ ಮೆ ಕೂಡ ಕೇಳಿದ್ದೇನೆ. ಅದು ನನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಈ ಬಗ್ಗೆ ಎಂ.ಬಿ.ಪಾಟೀಲ್‌ ಆದಿಯಾಗಿ ಯಾರೇ ಏನಾದರೂ ಪ್ರತಿಕ್ರಿಯೆ ನೀಡಲಿ, ಸ್ವಾಗತಾರ್ಹ ಎಂದರು.

===========
ಅಚ್ಛೇ ದಿನ್‌ ಯಾರ ಪಾಲಿಗೆ?

ಸೋಲಿನ ಭೀತಿಯಿಂದಾಗಿ ಮೋದಿ ಅವರು ಧರ್ಮ ರಾಜಕಾರಣ ಮಾಡುತ್ತಿದ್ದಾರೆ. ಇದರ ಬದಲು ಮಲೆನಾಡಿಗೆ ಸಂಬಂಧಿಸಿದ ಕಸ್ತೂರಿ ರಂಗನ್‌ ವರದಿ, ಬಗರ್‌ ಹುಕುಂ, ಅರಣ್ಯ ಸಾಗುವಳಿ ಈ ಅಂಶಗಳ ಬಗ್ಗೆ ಮಾತನಾಡಲಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಕುರಿತಾದ ಒಂದೇ ಒಂದು ಅರ್ಜಿಯನ್ನೂ ವಿಲೆ ಮಾಡಿರಲಿಲ್ಲ. ಕಾಂಗ್ರೆಸ್‌ ಅವಧಿಯಲ್ಲಿ ಸಾಕಷ್ಟುಗಳು ಅರ್ಜಿಗಳು ವಿಲೇವಾರಿ ಮಾಡಲಾಗಿದೆ. ಯಾರ ಪಾಲಿಗೆ ಅಚ್ಛೆ ದಿನ್‌ ಬಂದಿವೆ? ಜಿಎಸ್‌ಟಿ, ನೋಟು ಅಮಾನ್ಯೀಕರಣದಿಂದ ಆಗಿದ್ದೇನು? ಹೀಗೆ ಹಲವು ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಶಿವಕುಮಾರ್‌ ಅವರು ಮೋದಿ ಅವರಿಗೆ ಸವಾಲು ಹಾಕಿದರು.

======
ಈಶ್ವರಪ್ಪ ಒಬ್ಬ ಮೆಂಟಲ್‌ ಕೇಸ್‌

ಶಾಸಕ ಕೆ.ಎಸ್‌.ಈಶ್ವರಪ್ಪ ಅವರನ್ನು ನಾವು 'ಮೆಂಟಲ್‌ ಕೇಸ್‌' ಎಂದು ಪರಿಗಣಿಸಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ಮುಸ್ಲಿಮರಿಗೆ ಟಿಕೆಟ್‌ ನೀಡುವುದಿಲ್ಲವೆಂಬ ಈಶ್ವರಪ್ಪ ಅವರ ಹೇಳಿಕೆಗೆ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದರು. ಈಶ್ವರಪ್ಪ ಅವರನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ 'ಹಿಂದೂ' ಮುಂದು ಎನ್ನುತ್ತಿರಲ್ಲ. ಅಲ್ಪಸಂಖ್ಯಾತರೇನು ದೇಶದಲ್ಲಿ ಇರಬಾರದೇ ಎಂದು ಪ್ರಶ್ನಿಸಿದರು.

=======


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ