ಆ್ಯಪ್ನಗರ

ಅಶ್ಲೀಲ ಸಂದೇಶ: ವಿಚಾರಣೆಗೆ ಆದೇಶ

ನಗರಸಭೆ ಸದಸ್ಯೆ ನಾದೀರಾ ಪರ್ವಿನ್‌ ವಿರುದ್ಧ ಈಚೆಗೆ ವ್ಯಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಅಶ್ಲೀಲ ಸಂದೇಶಗಳನ್ನು ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸುವಂತೆ ಜೆಎಂಎಫ್‌ಸಿ ನ್ಯಾಯಾಧೀಶ ಸೈಯದ್‌ ಅರಾಫತ್‌ ಇಬ್ರಾಹಿಂ ಅವರು ನಗರ ಠಾಣೆಗೆ ಆದೇಶಿಸಿದ್ದಾರೆ.

Vijaya Karnataka 27 Jul 2019, 7:05 pm
Vijaya Karnataka Web pornography order to inquire
ಅಶ್ಲೀಲ ಸಂದೇಶ: ವಿಚಾರಣೆಗೆ ಆದೇಶ
ಸಾಗರ: ನಗರಸಭೆ ಸದಸ್ಯೆ ನಾದೀರಾ ಪರ್ವಿನ್‌ ವಿರುದ್ಧ ಈಚೆಗೆ ವ್ಯಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಅಶ್ಲೀಲ ಸಂದೇಶಗಳನ್ನು ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸುವಂತೆ ಜೆಎಂಎಫ್‌ಸಿ ನ್ಯಾಯಾಧೀಶ ಸೈಯದ್‌ ಅರಾಫತ್‌ ಇಬ್ರಾಹಿಂ ಅವರು ನಗರ ಠಾಣೆಗೆ ಆದೇಶಿಸಿದ್ದಾರೆ.

ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ನಾದೀರಾ ಪರ್ವಿನ್‌ ಅವರು 22ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದಾರೆ. 23ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದ ಅಬ್ದುಲ್‌ ಖಾದಿರ್‌ ಅವರು ನಾದೀರಾ ಪರ್ವಿನ್‌ ಅವರ ಮನೆಗೆ ಅತಿಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ್ದರು ಎಂದು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅದೇ ದಿನ ಅಬ್ದುಲ್‌ ಖಾದಿರ್‌ ಅವರು ಕೆಲವು ವ್ಯಾಟ್ಸ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ನಾದೀರಾ ಪರ್ವಿನ್‌ ಕುರಿತು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದರು ಎನ್ನಲಾಗಿದ್ದು, ನಾದೀರಾ ಪರ್ವಿನ್‌ ಅವರು ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ದೂರು ನೀಡಿದ್ದರು. ಆರೋಪಿಯ ವಿರುದ್ಧ ಯಾವುದೆ ಕ್ರಮ ಕೈಗೊಳ್ಳದ ಕಾರಣ ನಾದೀರಾ ಪರ್ವಿನ್‌ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸುವಂತೆ ನಗರ ಠಾಣೆ ಪೊಲೀಸರಿಗೆ ಆದೇಶಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ