ಆ್ಯಪ್ನಗರ

ಆಧುನಿಕ ಕೃಷಿ ಪದ್ಧತಿಗೆ ಆದ್ಯತೆ ನೀಡಿ: ಹಾಲಪ್ಪ

ಆಧುನಿಕ ಕೃಷಿ ಪದ್ಧತಿಗಳನ್ನು ರೈತರು ಅಳವಡಿಸಿಕೊಳ್ಳಬೇಕೆಂದು ಶಾಸಕ ಎಚ್‌.ಹಾಲಪ್ಪ ಹರತಾಳು ತಿಳಿಸಿದರು.

Vijaya Karnataka 18 Jun 2019, 5:00 am
ಹೊಸನಗರ: ಆಧುನಿಕ ಕೃಷಿ ಪದ್ಧತಿಗಳನ್ನು ರೈತರು ಅಳವಡಿಸಿಕೊಳ್ಳಬೇಕೆಂದು ಶಾಸಕ ಎಚ್‌.ಹಾಲಪ್ಪ ಹರತಾಳು ತಿಳಿಸಿದರು.
Vijaya Karnataka Web SMR-17HOSP5


ಕೃಷಿ ಇಲಾಖೆ ಏರ್ಪಡಿಸಿದ್ದ ಕೃಷಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕೇಂದ್ರ ಸರಕಾರ ರೈತರಿಗಾಗಿ ಹಲವು ಯೋಜನೆ ಜಾರಿಗೊಳಿಸಿದೆ. ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ರೈತರು ಮುಂದಾಗಬೇಕು. ತಂತ್ರಜ್ಞಾನದ ಪ್ರಗತಿಯ ದಿಕ್ಕಿನಲ್ಲಿ ಸಾಗುತ್ತಿರುವ ಇಂದಿನ ದಿನಮಾನದಲ್ಲಿ ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳುವ ನಿಟ್ಟಿನಲ್ಲಿ ಕೃಷಿಕರು ಮುಂದಾಗಬೇಕೆಂದರು. ಈ ವೇಳೆ ಜಿ.ಪಂ. ಸದಸ್ಯ ಸುರೇಶ್‌ ಸ್ವಾಮಿರಾವ್‌, ತಾ.ಪಂ.ಅಧ್ಯಕ್ಷ ವಾಸಪ್ಪಗೌಡ, ಉಪಾಧ್ಯಕ್ಷೆ ಶಕುಂತಲಾ ರಾಮಚಂದ್ರ, ಮತ್ತಿಮನೆ ಸುಬ್ರಹ್ಮಣ್ಯ, ಶೋಭಾ ಮಂಜುನಾಥಗೌಡ, ಅಶ್ವಿನಿ ರಾಜೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ