ಆ್ಯಪ್ನಗರ

ಪರವಾನಗಿ ಇಲ್ಲದ ಖಾಸಗಿ ಶಾಲೆ ಮಾನ್ಯತೆ ರದ್ದುಪಡಿಸಿ

ಜಿಲ್ಲೆಯಲ್ಲಿ ಶಿಕ್ಷ ಣ ಇಲಾಖೆಯಿಂದ ಮಾನ್ಯತೆ ಪಡೆಯದೆ ನಡೆಸುತ್ತಿರುವ ಖಾಸಗಿ ಪ್ರಾಥಮಿಕ ಶಾಲೆಗಳ ಮಾನ್ಯತೆಯನ್ನು ಕೂಡಲೇ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌, ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕರಿಗೆ ಖಡಕ್‌ ಸೂಚನೆ ನೀಡಿದರು.

Vijaya Karnataka 14 May 2019, 5:00 am
ಶಿವಮೊಗ್ಗ: ಜಿಲ್ಲೆಯಲ್ಲಿ ಶಿಕ್ಷ ಣ ಇಲಾಖೆಯಿಂದ ಮಾನ್ಯತೆ ಪಡೆಯದೆ ನಡೆಸುತ್ತಿರುವ ಖಾಸಗಿ ಪ್ರಾಥಮಿಕ ಶಾಲೆಗಳ ಮಾನ್ಯತೆಯನ್ನು ಕೂಡಲೇ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌, ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕರಿಗೆ ಖಡಕ್‌ ಸೂಚನೆ ನೀಡಿದರು.
Vijaya Karnataka Web SMR-13GANESH1


ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ದಾಖಲಾತಿ ಹಾಗೂ ವ್ಯವಸ್ಥಿತ ನಿರ್ವಹಣೆ ಕುರಿತು ಏರ್ಪಡಿಸಿದ್ದ ಶಿಕ್ಷ ಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಪರವಾನಗಿ ಪಡೆಯದೇ ನಡೆಸುತ್ತಿರುವ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸೂಚನೆ ನಂತರವೂ ಸುಧಾರಣೆ ಕಾಣದ ಶಾಲೆಗಳ ಮಾನ್ಯತೆ ರದ್ದುಪಡಿಸಿ ಆದೇಶ ಹೊರಡಿಸಬೇಕು. ತಪ್ಪಿದಲ್ಲಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷ ಣಾಧಿಕಾರಿಗಳನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಶಾಲೆಗಳ ಸೂಚನಾ ಫಲಕದಲ್ಲಿ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಶುಲ್ಕಗಳ ವಿವರ ಹಾಕದೇ ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಬಗ್ಗೆ ಹಲವು ದೂರು ಬಂದಿವೆ. ಹೆಚ್ಚಿನ ಶುಲ್ಕ ಪಡೆಯುತ್ತಿರುವ ಶಾಲೆಗಳ ಪರವಾನಗಿ ರದ್ದುಗೊಳಿಸಿ, ಪೋಷಕರು ಪರವಾನಗಿ ಪಡೆದ ಶಾಲೆಗಳಿಗೆ ಮಕ್ಕಳನ್ನು ಸೇರಿಸುವಂತೆ ಮನವೊಲಿಸಬೇಕು. ಪೋಷಕರಿಂದ ಹೆಚ್ಚಿನ ಹಣ ವಸೂಲಿ ಮಾಡಿರುವುದು ಕಂಡು ಬಂದರೆ ಶಾಲಾ ಆಡಳಿತ ಮಂಡಳಿಯಿಂದ ಪೋಷಕರಿಗೆ ಹಣ ಹಿಂದಿರುಗಿಸಬೇಕು. ಈ ಸಂಬಂಧ ತಾಲೂಕಿನ ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಪರಿಶೀಲಿಸಿ ಸಮಗ್ರ ವರದಿಯನ್ನು ವಾರದೊಳಗೆ ಡಿಡಿಪಿಐ ಅವರಿಗೆ ಸಲ್ಲಿಸುವಂತೆ ಸೂಚಿಸಿದರು.

ಕಡಿಮೆ ಫಲಿತಾಂಶಕ್ಕೆ ಡಿಸಿ ಗರಂ:

ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು ಫಲಿತಾಂಶದ ಹಿನ್ನೆಡೆಗೆ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಂಡು ಫಲಿತಾಂಶ ಸುಧಾರಣೆಗೆ ಕ್ರಮವಹಿಸಬೇಕು. ಮುಂದೆಯೂ ಫಲಿತಾಂಶ ಕಡಿಮೆ ಬಂದರೆ ಶಿಕ್ಷಣಾಧಿಕಾರಿಗಳನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

ಕಳಪೆ ಫಲಿತಾಂಶ ಪಡೆದಿರುವ ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದ ಪ್ರೌಢಶಾಲೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ಶಾಲೆಗೆ ದಾಖಲಾಗಿರುವ ಮಕ್ಕಳನ್ನು ಸಮೀಪದ ಸರಕಾರಿ ಶಾಲೆಗೆ ದಾಖಲಿಸುವಂತೆ ಶಿಕಾರಿಪುರದ ಕ್ಷೇತ್ರ ಶಿಕ್ಷ ಣಾಧಿಕಾರಿಗಳಿಗೆ ಸೂಚಿಸಿದರು.

ಕರ್ತವ್ಯದಲ್ಲಿ ನಿರ್ಲಕ್ಷ ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಖಾಸಗಿ ಶಾಲೆಗಳಲ್ಲಿ ನೋಟ್‌ಪುಸ್ತಕ, ಸಮವಸ್ತ್ರ ಕಡ್ಡಾಯ ಬಗ್ಗೆ ಒತ್ತಾಯ ಮಾಡುತ್ತಿದ್ದಾರೆಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಶಾಲಾ ಆವರಣದ ವ್ಯಾಪ್ತಿಯಲ್ಲಿ ಮಾರಾಟ ಮಾಡದಂತೆ ಸರಕಾರ ಆದೇಶ ಹೊರಡಿಸಿದರೂ ನಿರ್ಲಕ್ಷ ್ಯ ಮಾಡಿ, ಮಾರಾಟ ಮಾಡುವವರ ವಿರುದ್ಧವೂ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕಿ ಸುಮಂಗಳಾ ಪಿ.ಕುಚಿನಾಡ, ಪದವಿಪೂರ್ವ ಕಾಲೇಜು ಶಿಕ್ಷ ಣ ಇಲಾಖೆ ಉಪನಿರ್ದೇಶಕ ಇಮ್ತಿಯಾಜ್‌ ಅಹ್ಮದ್‌, ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಹಾಗೂ ಶಿಕ್ಷ ಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ