ಆ್ಯಪ್ನಗರ

ಅವೈಜ್ಞಾನಿಕ ಕೆರೆ ಅಭಿವೃದ್ಧಿ ವಿರೋಧಿಸಿ 30ರಿಂದ ಧರಣಿ

ನಗರಾಭಿವೃದ್ಧಿ ಪ್ರಾಧಿಕಾರದಿಂದ ಸೋಮಿನಕೊಪ್ಪ ಕೆರೆಯನ್ನು ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಆರೋಪಿಸಿ ಸೆ.30ರಂದು ಬೆಳಗ್ಗೆ 10.30ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಯಲಿದೆ.

Vijaya Karnataka 28 Sep 2019, 5:00 am
ಶಿವಮೊಗ್ಗ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಸೋಮಿನಕೊಪ್ಪ ಕೆರೆಯನ್ನು ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಆರೋಪಿಸಿ ಸೆ.30ರಂದು ಬೆಳಗ್ಗೆ 10.30ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಯಲಿದೆ.
Vijaya Karnataka Web protest against the unscientific lake development
ಅವೈಜ್ಞಾನಿಕ ಕೆರೆ ಅಭಿವೃದ್ಧಿ ವಿರೋಧಿಸಿ 30ರಿಂದ ಧರಣಿ


ಸೋಮಿನಕೊಪ್ಪದ ಸ.ನಂ.47ರ ಕೆರೆ ಅಭಿವೃದ್ಧಿಗಾಗಿ 5.77 ಕೋಟಿ ರೂ. ವೆಚ್ಚದಲ್ಲಿಕಾಮಗಾರಿ ಕೈಗೊಳ್ಳಲು ಸರಕಾರ ಅನುಮೋದನೆ ನೀಡಿದೆ. ಇದರಲ್ಲಿವಾಕಿಂಗ್‌ ಪಾಥ್‌ಗಾಗಿಯೇ 2 ಕೋಟಿ ಖರ್ಚು ಮಾಡಲಾಗುತ್ತಿದೆ. 36 ಲಕ್ಷ ರೂ.ಗಳ ವೆಚ್ಚದಲ್ಲಿಪ್ಲೇಗ್ರೌಂಡ್‌, ಸ್ಟೋರೇಜ್‌ ರೂಂಗೆ 2.75 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಆದರೆ, ಕೆರೆಯಲ್ಲಿತುಂಬಿರುವ ಹೂಳು ತೆಗೆಯದೇ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ದೂರಿದೆ.

ಈ ಕೆರೆ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ದುಂದು ವೆಚ್ಚದಲ್ಲಿಅಭಿವೃದ್ಧಿಗೆ ಹುನ್ನಾರ ನಡೆಯುತ್ತಿದೆ. ಇಷ್ಟೊಂದು ಬಂಡವಾಳ ಹಾಕಿ ಒಂದು ಕೆರೆ ಅಭಿವೃದ್ಧಿ ಮಾಡುವ ಬದಲು ಸರಳವಾಗಿ ಹಲವು ಕೆರೆಗಳನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸಬೇಕು. ಈ ಬಗ್ಗೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿಯೂ ಯಾವುದೇ ಪ್ರಯೋಜನವಾಗಿಲ್ಲಎಂದು ಸಮಿತಿ ಕಾರ್ಯದರ್ಶಿ ಟಿ.ಎಂ.ಅಶೋಕ್‌ ಯಾದವ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿಅಸಮಾಧಾನ ವ್ಯಕ್ತಪಡಿಸಿದರು.

ಕೆರೆ ಅಭಿವೃದ್ಧಿ ಹೆಸರಿನಲ್ಲಿಸಾರ್ವಜನಿಕರ ಹಣ ದುಂದುವೆಚ್ಚ ಮಾಡುವುದು ಸರಿಯಲ್ಲ. ಹೀಗಾಗಿ, ಈ ಅವೈಜ್ಞಾನಿಕ ಕಾಮಗಾರಿಯನ್ನು ಕೂಡಲೇ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಬೇಕು. ಇಲ್ಲವಾದಲ್ಲಿ ಕಾಮಗಾರಿ ನಿಲ್ಲುವ ವರೆಗೂ ಧರಣಿ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿಸಮಿತಿ ಗೌರವಾಧ್ಯಕ್ಷ ಡಾ.ಎಲ್‌.ಎನ್‌.ನಾಯಕ್‌, ಅಧ್ಯಕ್ಷ ಡಾ.ಚಿಕ್ಕಸ್ವಾಮಿ, ಪ್ರಮುಖರಾದ ಅಜಯ್‌ಕುಮಾರ್‌ ಶರ್ಮಾ, ಸುಬ್ರಮಣ್ಯ, ಶಿವಕುಮಾರ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ