ಆ್ಯಪ್ನಗರ

ವೃತ್ತಿ ನೈಪುಣ್ಯತೆಯಿಂದ ಗುಣಮಟ್ಟದ ಸೇವೆ

ಸ್ಪರ್ಧಾತ್ಮಕ ಯುಗದಲ್ಲಿ ನೌಕರರು ತಮ್ಮ ವೃತ್ತಿಯಲ್ಲಿ ವೃತ್ತಿಪರತೆ, ಕೌಶಲ್ಯವನ್ನು ಅಳವಡಿಸಿಕೊಂಡಾಗ ಮಾತ್ರ ಗುಣಮಟ್ಟದ ಸೇವೆ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷ ಣ ಸಮಿತಿ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌ ಹೇಳಿದರು.

Vijaya Karnataka 25 Jul 2019, 5:00 am
ಶಿವಮೊಗ್ಗ: ಸ್ಪರ್ಧಾತ್ಮಕ ಯುಗದಲ್ಲಿ ನೌಕರರು ತಮ್ಮ ವೃತ್ತಿಯಲ್ಲಿ ವೃತ್ತಿಪರತೆ, ಕೌಶಲ್ಯವನ್ನು ಅಳವಡಿಸಿಕೊಂಡಾಗ ಮಾತ್ರ ಗುಣಮಟ್ಟದ ಸೇವೆ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷ ಣ ಸಮಿತಿ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌ ಹೇಳಿದರು.
Vijaya Karnataka Web SMG-2407-2-15-24SMG1


ಜವಾಹರಲಾಲ್‌ ನೆಹರೂ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ಸಭಾಂಗಣದಲ್ಲಿ ವಿದ್ಯಾರ್ಥಿ ನಿಲಯ ಹಾಗೂ ಸಾರಿಗೆ ವಿಭಾಗದ ಸಿಬ್ಬಂದಿಗೋಸ್ಕರ ಆಯೋಜಿಸಿರುವ ಮೂರು ದಿನಗಳ 'ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ'ವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯ. ಆ ಮೂಲಕ ಫಲಾನುಭವಿಯನ್ನು ಸಂತೃಪ್ತಿಗೊಳಿಸಬಹುದು. ಬದಲಾದ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ವೃತ್ತಿಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾಲೇಜು ಪ್ರಾಂಶುಪಾಲ ಡಾ.ಎಚ್‌.ಆರ್‌. ಮಹಾದೇವಸ್ವಾಮಿ ಅಧ್ಯಕ್ಷ ತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ.ಎಲ್‌.ಕೆ.ಶ್ರೀಪತಿ, ರಾಷ್ಟ್ರೀಯ ಶಿಕ್ಷ ಣ ಸಮಿತಿಯ ಉಪಾಧ್ಯಕ್ಷ ಅಶ್ವತ್‌ ನಾರಾಯಣ ಶೆಟ್ಟಿ, ಎಂಬಿಎ ವಿಭಾಗದ ಪ್ರಭಾರ ಮುಖ್ಯಸ್ಥ ಡಾ.ಲಕ್ಷ್ಮೀಶ್‌ ಕಂಟಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ