ಆ್ಯಪ್ನಗರ

ರಾಜೀವ್‌ ಗಾಂಧಿ ಆಧುನಿಕ ಭಾರತದ ಪಿತಾಮಹ

ಮಾಜಿ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿ ಅವರ 28ನೇ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಾಜೀವ್‌ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

Vijaya Karnataka 22 May 2019, 5:00 am
ಶಿವಮೊಗ್ಗ: ಮಾಜಿ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿ ಅವರ 28ನೇ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಾಜೀವ್‌ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
Vijaya Karnataka Web SMR-21ganesh3


ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಮಾತನಾಡಿ, ದೇಶಕಂಡ ಶ್ರೇಷ್ಠ ನಾಯಕರಲ್ಲಿ ರಾಜೀವ್‌ ಗಾಂಧಿ ಕೂಡ ಒಬ್ಬರು. ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಪ್ರಧಾನಿಯಾದ ಹಿರಿಮೆ ಅವರದ್ದು. ದೇಶದಲ್ಲಿ ಅಭಿವೃದ್ಧಿ ಪರ್ವವನ್ನು ಹುಟ್ಟುಹಾಕಿ ಯುವ ಸಮೂಹಕ್ಕೆ ಸ್ಫೂರ್ತಿ ತುಂಬಿದ ರಾಜೀವ್‌ ಗಾಂಧಿ ಅವರು ಮತದಾನ ವಯಸ್ಸನ್ನು 18 ವರ್ಷಕ್ಕೆ ನಿಗದಿಪಡಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಿದರು ಎಂದರು.

ಸಂಪೂರ್ಣ ಸಾಕ್ಷರತಾ ಅಂದೋಲನ ಜಾರಿ, ಪಂಚಾಯತ್‌ ರಾಜ್‌ ವ್ಯವಸ್ಥೆ ತಿದ್ದುಪಡಿ, ಪಕ್ಷಾಂತರ ನಿಷೇಧ ಕಾಯಿದೆ, ಪ್ರತಿಯೊಂದು ಜಿಲ್ಲೆಗೆ ನವೋದಯ ವಿದ್ಯಾ ಕೇಂದ್ರ, ಬಡತನ ನಿರ್ಮೂಲನೆಗೆ ಜವಾಹರ್‌ ರೋಜ್‌ಗಾರ್‌ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಆಧುನಿಕ ಭಾರತದ ಪಿತಾಮಹಾ ಎನ್ನಿಸಿಕೊಂಡವರು ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಸ್‌.ಚಂದ್ರಭೂಪಾಲ್‌, ವಿಜಯಲಕ್ಷ್ಮಿ ಪಾಟೀಲ್‌ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

ರೋಗಿಗಳಿಗೆ ಹಣ್ಣು ವಿತರಣೆ:
ಮಾಜಿ ಪ್ರಧಾನಮಂತ್ರಿ ದಿ.ರಾಜೀವ್‌ ಗಾಂಧಿ ಅವರ 28ನೇ ಪುಣ್ಯ ಸ್ಮರಣೆ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ಮೆಗ್ಗಾನ್‌ ಆಸ್ಪತ್ರೆಯ ಒಳ ರೋಗಿಗಳಿಗೆ ಮಂಗಳವಾರ ಹಣ್ಣು ಹಂಪಲು ವಿತರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ