ಆ್ಯಪ್ನಗರ

ಮತ್ತೊಮ್ಮೆ ಸರ್ಜಿಕಲ್‌ ಸ್ಟ್ರೈಕ್‌ಗೆ ಆಗ್ರಹ

ಈ ಹಿಂದೆ ಸರ್ಜಿಕಲ್‌ ಸ್ಟ್ರೈಕ್‌ ಮಾಡಿದಂತೆ ಮತ್ತೊಮ್ಮೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಮುಖಂಡರು ಆಗ್ರಹಿಸಿದರು.

Vijaya Karnataka 18 Feb 2019, 5:00 am
ಶಿವಮೊಗ್ಗ: ಈ ಹಿಂದೆ ಸರ್ಜಿಕಲ್‌ ಸ್ಟ್ರೈಕ್‌ ಮಾಡಿದಂತೆ ಮತ್ತೊಮ್ಮೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಮುಖಂಡರು ಆಗ್ರಹಿಸಿದರು.
Vijaya Karnataka Web SMG-1702-2-15-17SMG2


ಜಮ್ಮು ಕಾಶ್ಮೀರದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಸ್‌.ರುದ್ರೇಗೌಡ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿಯಿಂದ ನಗರದ ಗೋಪಿ ವೃತ್ತದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

ಭಯೋತ್ಪಾದಕ ಸಂಘಟನೆಗಳಿಗೆ ಹಾಗೂ ಭಯೋತ್ಪಾದನ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದಂತಹ ರಾಷ್ಟ್ರಗಳ ವಿರುದ್ಧ ಕಠಿಣ ನಿಲುವು ಕೈಗೊಳ್ಳಬೇಕು.

ಆ ಮೂಲಕ ಮುಂದೆ ಈ ರೀತಿಯ ಘಟನೆಗಳು ಆಗದಂತೆ ಎಚ್ಚರ ವಹಿಸುವ ಜತೆಗೆ, ಹುತಾತ್ಮರಾದ ಯೋಧರ ಕುಟುಂಬಗಳಿಗೆ ಸೂಕ್ತ ನೆರವು ನೀಡಬೇಕೆಂದು ಆಗ್ರಹಿಸಿದರು.

ಸಂಸದ ಬಿ.ವೈ.ರಾಘವೇಂದ್ರ, ಉಪ ಮೇಯರ್‌ ಚನ್ನಬಸಪ್ಪ, ಜಿಪಂ ಸದಸ್ಯ ವೀರಭದ್ರಪ್ಪ ಪೂಜಾರ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ