ಆ್ಯಪ್ನಗರ

ಗಾಂಜಾ ಬೆಳೆದವನಿಗೆ ಕಠಿಣ ಸಜೆ

ಬಗರ್‌ಹುಕುಂ ಸಾಗುವಳಿ ಭೂಮಿಯಲ್ಲಿ ಮೆಕ್ಕೆ ಜೋಳದ ನಡುವೆ ಅಕ್ರಮವಾಗಿ ಗಾಂಜಾ ಬೆಳೆದವನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಸಜೆಯೊಂದಿಗೆ 20ಸಾವಿರ ರೂ. ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.

Vijaya Karnataka 18 Jan 2019, 5:00 am
ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿ ಭೂಮಿಯಲ್ಲಿ ಮೆಕ್ಕೆ ಜೋಳದ ನಡುವೆ ಅಕ್ರಮವಾಗಿ ಗಾಂಜಾ ಬೆಳೆದವನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಸಜೆಯೊಂದಿಗೆ 20ಸಾವಿರ ರೂ. ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.
Vijaya Karnataka Web seviour punishment to ganja grower
ಗಾಂಜಾ ಬೆಳೆದವನಿಗೆ ಕಠಿಣ ಸಜೆ


ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯ ಸುನೀಲ್‌ ನಾಯ್ಕ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಕುಂಚೇನಹಳ್ಳಿ ಸಮೀಪದ ಚಿಕ್ಕರಾಯನಕೆರೆಯಲ್ಲಿ ಬಗರ್‌ ಹುಕುಂ ಸಾಗುವಳಿ ಭೂಮಿಯಲ್ಲಿ ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆಸಿದ್ದ. 2017ನೇ ಅಕ್ಟೋಬರ್‌ 7ರಂದು ಅಬಕಾರಿ ನಿರೀಕ್ಷಕಿ ಶೀಲಾ ಆರ್‌.ದಾರಜ್‌ಕರ್‌ ಮತ್ತು ಸಿಬ್ಬಂದಿ ದಾಳಿ ನಡೆಸಿ ಗಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ ಅವರು 3 ವರ್ಷ 2 ತಿಂಗಳು ಕಠಿಣ ಸಜೆ ಮತ್ತು 20ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ವಿ.ಜಿ.ಯಳಗೇರಿ ವಾದಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ