ಆ್ಯಪ್ನಗರ

ಹಸಿರು ನಾಶ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ

ಮರಗಳ್ಳರು, ಅರಣ್ಯ ಅತಿಕ್ರಮಣಕಾರರು ಹಾಗೂ ಭೂಗಳ್ಳರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದಲ್ಲಿ ಮಾತ್ರ ತಪ್ಪು ಮಾಡುವವರ ಸಂಖ್ಯೆಯಲ್ಲಿ ಇಳಿಕೆಯಾಗಲು ಸಾಧ್ಯ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ್‌ ಪರಿಸರ ಅಭಿಪ್ರಾಯ ವ್ಯಕ್ತಪಡಿಸಿದರು.ಅರಣ್ಯ ಇಲಾಖೆ ವತಿಯಿಂದ ಇಲ್ಲಿನ ನಿದಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿ, ಕಠಿಣ ಕಾನೂನುಗಳು ಸರಿಯಾಗಿ ಅನುಷ್ಠಾನಗೊಂಡಲ್ಲಿ ಮಾತ್ರ ಪರಿಸರ ಸಂರಕ್ಷ ಣೆ ಸಾಧ್ಯ. ಇಲ್ಲವಾದರೆ ಹಸಿರು ಇನ್ನಷ್ಟು ಮಾಯವಾಗುತ್ತದೆ ಎಂದರು.

Vijaya Karnataka Web 10 Jun 2019, 5:00 am
ಶಿವಮೊಗ್ಗ:ಮರಗಳ್ಳರು, ಅರಣ್ಯ ಅತಿಕ್ರಮಣಕಾರರು ಹಾಗೂ ಭೂಗಳ್ಳರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದಲ್ಲಿ ಮಾತ್ರ ತಪ್ಪು ಮಾಡುವವರ ಸಂಖ್ಯೆಯಲ್ಲಿ ಇಳಿಕೆಯಾಗಲು ಸಾಧ್ಯ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ್‌ ಪರಿಸರ ಅಭಿಪ್ರಾಯ ವ್ಯಕ್ತಪಡಿಸಿದರು.ಅರಣ್ಯ ಇಲಾಖೆ ವತಿಯಿಂದ ಇಲ್ಲಿನ ನಿದಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿ, ಕಠಿಣ ಕಾನೂನುಗಳು ಸರಿಯಾಗಿ ಅನುಷ್ಠಾನಗೊಂಡಲ್ಲಿ ಮಾತ್ರ ಪರಿಸರ ಸಂರಕ್ಷ ಣೆ ಸಾಧ್ಯ. ಇಲ್ಲವಾದರೆ ಹಸಿರು ಇನ್ನಷ್ಟು ಮಾಯವಾಗುತ್ತದೆ ಎಂದರು.
Vijaya Karnataka Web SMG-0906-2-15-9SMG1


ವಾಯುಮಾಲಿನ್ಯ ನಿಯಂತ್ರಣ ಮಾಡುವುದರ ಜತೆಗೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಐದು ಗಿಡಗಳನ್ನು ನೆಟ್ಟು ಬೆಳೆಸಬೇಕು. ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದರು.

* ಅವೈಜ್ಞಾನಿಕ ಅಭಿವೃದ್ಧಿ ನಿಲ್ಲಿಸಿ: ಇಂದು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣ ಅರಣ್ಯ ನಾಶ. ಗಿಡ ಮರಗಳನ್ನು ಕಡಿದು ಡಾಂಬಾರು ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದರಿಂದ ಆಗಬಹುದಾದ ಸಮಸ್ಯೆಗಳ ಬಗ್ಗೆಯೂ ಯೋಚಿಸಬೇಕು. ಅವೈಜ್ಞಾನಿಕ ಅಭಿವೃದ್ಧಿ ಕಾರ್ಯಗಳನ್ನು ಕೂಡಲೇ ನಿಲ್ಲಿಸಬೇಕು. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

ಶಾಸಕ ಕೆ.ಬಿ.ಅಶೋಕ್‌ನಾಯ್ಕ್‌ ಕಾರ್ಯಕ್ರಮ ಉದ್ಘಾಟಿಸಿದರು. ಅರಣ್ಯ ಇಲಾಖೆಯ ಮಹೇಶ್‌, ಶಾಲೆಯ ಮುಖ್ಯ ಶಿಕ್ಷಕರು, ಸ್ಥಳೀಯ ಜನಪ್ರತಿನಿಧಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ