ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಶಿಕ್ಷಕ ಸಾವು!

ನಗರದಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಶಿಕ್ಷಕ ಮೃತಪಟ್ಟಿದ್ದಾರೆ. ಇವರಿಗೆ 48 ವರ್ಷ ವಯಸ್ಸಾಗಿತ್ತು.

Vijaya Karnataka Web 15 Jul 2020, 3:50 pm
ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಶಿಕ್ಷಕ ಮೃತಪಟ್ಟಿದ್ದಾರೆ.
Vijaya Karnataka Web heart attack  new


ಭದ್ರಾವತಿ ಈಶ್ವರಮ್ಮ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಕುಮಾರ್(48)ಮೃತಪಟ್ಟವರು. ಮಧ್ಯಾಹ್ನ ಊಟ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಇತರೆ ಶಿಕ್ಷಕರು ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದರು.

ಮೃತ ಶಿಕ್ಷಕ ಕುಮಾರ್



ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜು.13ರ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಆದರೆ, ರಾಜ್ಯ ಸರಕಾರ ಮಂಗಳವಾರದಿಂದ ಒಂದು ವಾರ ಕಾಲ 'ಲಾಕ್‌ಡೌನ್‌' ಘೋಷಣೆ ಮಾಡಿರುವುದರಿಂದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ.

ಹೈ-ಬಿಪಿಯನ್ನು ಕಂಟ್ರೋಲ್‌ನಲ್ಲಿಡಲು ಸಿಂಪಲ್ ಮನೆಮದ್ದುಗಳಿವು

ಒಟ್ಟು 228 ಮೌಲ್ಯಮಾಪನ ಕೇಂದ್ರಗಳನ್ನು ತೆರೆಯಲಾಗಿದ್ದು, ವಿಷಯವಾರು ಒಟ್ಟು 71,154 ಮೌಲ್ಯಮಾಪಕರನ್ನು ನೇಮಿಸಲಾಗಿದೆ. ಮೌಲ್ಯಮಾಪನ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಜುಲೈನಲ್ಲಿ ಮೌಲ್ಯಮಾಪನ ಕಾರ್ಯ ಮುಗಿಯಲಿದ್ದು, ಆಗಸ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ