ಆ್ಯಪ್ನಗರ

ಶಾಲೆ ಬಂದ್‌ ಮಾಡಿ ಶಿಕ್ಷಕರ ಪ್ರತಿಭಟನೆ

ಪ್ರಾಥಮಿಕ ಶಾಲಾ ಶಿಕ್ಷ ಕರನ್ನು 1 ರಿಂದ 5ನೇ ತರಗತಿಗೆ ಸೀಮಿತಗೊಳಿಸಿದ ಆದೇಶವನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆ ಬಂದ್‌ ಮಾಡಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

Vijaya Karnataka 10 Jul 2019, 5:00 am
ಶಿವಮೊಗ್ಗ : ಪ್ರಾಥಮಿಕ ಶಾಲಾ ಶಿಕ್ಷ ಕರನ್ನು 1 ರಿಂದ 5ನೇ ತರಗತಿಗೆ ಸೀಮಿತಗೊಳಿಸಿದ ಆದೇಶವನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆ ಬಂದ್‌ ಮಾಡಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.
Vijaya Karnataka Web SMR-9ganesh8


2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷ ಕರನ್ನು 1 ರಿಂದ 5ನೇ ತರಗತಿಗೆ ಸೀಮಿತಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಬಹಳಷ್ಟು ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹೀಗಾಗಿ ಈ ಆದೇಶವನ್ನು ಕೂಡಲೇ ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷ ಕರಿಗೆ ಪದವೀಧರ ಶಿಕ್ಷ ಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. 3 ವರ್ಷಗಳಿಂದ ಶಿಕ್ಷ ಕರ ವರ್ಗಾವಣೆ ಆಗದೇ ಇರುವುದರಿಂದ ಶೇಕಡಾವಾರು ಪರಿಗಣಿಸಿ ಒಟ್ಟಿಗೆ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾನಿರತ ಶಿಕ್ಷ ಕರು ಒತ್ತಾಯಿಸಿದರು.

ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು, ಶಿಕ್ಷ ಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿನ ನ್ಯೂನತೆ ಸರಿಪಡಿಸಬೇಕು, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷ ಕರನ್ನು ಪರಿಗಣಿಸಬೇಕು, ಪ್ರಾಥಮಿಕ ಶಾಲಾ ಶಿಕ್ಷ ಕರಿಗೂ ಉಪನಿರ್ದೇಶಕರವರೆಗೆ ಬಡ್ತಿ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹಬಲೇಶ್ವರ ಹೆಗಡೆ, ಪ್ರಧಾನ ಕಾರ್ಯದರ್ಶಿ ಡಿ.ಬಿ.ರುದ್ರಪ್ಪ, ಪ್ರಮುಖರಾದ ಸಿ.ಜಯಪ್ಪ, ಪಾಪಯ್ಯ, ಸುಮತಿ, ಸತೀಶ್‌, ಗಂಗಾನಾಯ್ಕ, ವಾಣಿ, ಲೋಲಾಕ್ಷಿ, ಬಸವಂತರಾವ್‌ ದಾಳೆ ಸೇರಿದಂತೆ ಹಲವು ಶಿಕ್ಷಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ