ಆ್ಯಪ್ನಗರ

ಐಎಂಎ ದೋಖಾ ಪ್ರಕರಣ ಸಿಬಿಐಗೆ ವಹಿಸಿ

ಐಎಂಎ ಜುವೆಲ್ಲರಿ ಕಂಪನಿಯಲ್ಲಿ ಬೆಳಕಿಗೆ ಬಂದ ಸುಮಾರು 10 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು.

Vijaya Karnataka 13 Jun 2019, 5:00 am
ಶಿವಮೊಗ್ಗ: ಐಎಂಎ ಜುವೆಲ್ಲರಿ ಕಂಪನಿಯಲ್ಲಿ ಬೆಳಕಿಗೆ ಬಂದ ಸುಮಾರು 10 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು.
Vijaya Karnataka Web the ima scam case was handed over to the cbi
ಐಎಂಎ ದೋಖಾ ಪ್ರಕರಣ ಸಿಬಿಐಗೆ ವಹಿಸಿ


ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಐಎಂಎ ಕಂಪನಿಯ ಭಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಅಸಹಾಯಕ ರೀತಿಯಲ್ಲಿ ವರ್ತಿಸುತ್ತಿದೆ. ಬಡ, ಮಧ್ಯಮ ವರ್ಗದವರು ಬೀದಿಗೆ ಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಈ ಜನರ ಕಾಳಜಿ ಬಗ್ಗೆ ಸರಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ವಾ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ನಡೆದ ಅತೀ ದೊಡ್ಡ ಹಗರಣ ಇದಾಗಿದೆ. ಈ ಹಗರಣದ ಹಿನ್ನೆಲೆಯಲ್ಲಿ ಯಾವುದೇ ಸಂಸ್ಥೆಯಲ್ಲಿ ಜನರು ಹೂಡಿಕೆ ಮಾಡುವುದಕ್ಕೆ ಭಯ ಪಡುತ್ತಿದ್ದಾರೆ. ಐಎಂಎ ಕಂಪನಿ ಹೂಡಿಕೆದಾರರಿಗೆ ದೋಖಾ ಪ್ರಕರಣದಲ್ಲಿ ಪ್ರಭಾವಿ ಮಂತ್ರಿಗಳ ಪಾತ್ರವಿರುವುದು ಕೇಳಿಬರುತ್ತಿದೆ. ಗೃಹ ಮಂತ್ರಿಗಳು ಇಂತಹವರ ವಿರುದ್ಧ ಕ್ರಮತೆಗೆದುಕೊಳ್ಳಲು ಕಾನೂನು ಇಲ್ಲ ಎನ್ನುತ್ತಿದ್ದಾರೆ. ಇದರ ವಿರುದ್ಧ ಸರಕಾರ ಕೂಡಲೇ ಕ್ರಮ ತೆಗೆದುಕೊಳ್ಳಲು ಮುಂದಾಗಲಿ, ಇಲ್ಲದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ