ಆ್ಯಪ್ನಗರ

ಜನಾದೇಶ ಜನಸೇವೆಗೆ ಬಳಕೆಯಾಗಲಿ

:ಬಹಳ ವರ್ಷಗಳ ಕಾಲ ಪುರಸಭೆಯಲ್ಲಿ ಆಳ್ವಿಕೆ ನಡೆಸಿದ್ದ ಬಿಜೆಪಿಯನ್ನು ತಿರಸ್ಕರಿಸಿದ ಪಟ್ಟಣದ ಜನತೆ, ಈ ಬಾರಿ ಕಾಂಗ್ರೆಸ್‌ ಪಕ್ಷ ಕ್ಕೆ ಹೆಚ್ಚಿನ ಬಹುಮತ ನೀಡುವ ಮೂಲಕ ಜನಾದೇಶ ನೀಡಿದ್ದಾರೆ. ಅದನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ನಗರದ ಮಹಾದೇವಪ್ಪ ಹೇಳಿದರು.

Vijaya Karnataka 10 Jun 2019, 5:00 am
ಶಿಕಾರಿಪುರ :ಬಹಳ ವರ್ಷಗಳ ಕಾಲ ಪುರಸಭೆಯಲ್ಲಿ ಆಳ್ವಿಕೆ ನಡೆಸಿದ್ದ ಬಿಜೆಪಿಯನ್ನು ತಿರಸ್ಕರಿಸಿದ ಪಟ್ಟಣದ ಜನತೆ, ಈ ಬಾರಿ ಕಾಂಗ್ರೆಸ್‌ ಪಕ್ಷ ಕ್ಕೆ ಹೆಚ್ಚಿನ ಬಹುಮತ ನೀಡುವ ಮೂಲಕ ಜನಾದೇಶ ನೀಡಿದ್ದಾರೆ. ಅದನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ನಗರದ ಮಹಾದೇವಪ್ಪ ಹೇಳಿದರು.
Vijaya Karnataka Web SMR-9SKP1


ಪಟ್ಟಣದಲ್ಲಿ ಶುಕ್ರವಾರ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ದಿಂದ ಗೆಲುವು ಸಾಧಿಸಿದ ಸದಸ್ಯರು ಮತ್ತು ಸೋತ ಅಭ್ಯರ್ಥಿಗಳಿಗೆ ಪುರಸ್ಕರಿಸಿ ಅವರು ಮಾತನಾಡಿದರು. ಅಧಿಕಾರ ಶಾಶ್ವತವಲ್ಲ. ಸಿಕ್ಕ ಅವಕಾಶದಲ್ಲಿ ಜನರಿಗೆ ಉತ್ತಮ ಆಡಳಿತ ನೀಡಬೇಕು. ತಮ್ಮ ಕೆಲಸಕ್ಕಾಗಿ ಆಗಮಿಸುವ ಜನರಿಗೆ ಅಧಿಕಾರಿಗಳ ಮೂಲಕ ತ್ವರಿತಗತಿಯಲ್ಲಿ ಕೆಲಸ ಮಾಡಿಸಿಕೊಡಬೇಕು. ಕಟ್ಟಡ ಪರವಾನಗಿ, ನೀರು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗೋಣಿ ಮಾಲತೇಶ್‌ ಮಾತನಾಡಿ, ಕಾಂಗ್ರೆಸ್‌ ಪಕ್ಷ ಕ್ಕೆ ಶಿಕಾರಿಪುರ ಮತ್ತು ಶಿರಾಳಕೊಪ್ಪದ ಜನತೆ ಅಧಿಕಾರ ನೀಡಿದ್ದಾರೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಬೇಕು. ಸರಕಾರದ ಜತೆ ಸಂಪರ್ಕ ಸಾಧಿಸಿ, ಬಡಜನತೆಗೆ ವಿತರಿಸಲು ನಿವೇಶನಕ್ಕಾಗಿ ಜಮೀನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನೂತನ ಸದಸ್ಯರುಗಳಾದ ಹುಲ್ಮಾರ್‌ ಮಹೇಶ್‌, ರಮೇಶ್‌(ಗುಂಡ), ಗೋಣಿ ಪ್ರಕಾಶ್‌, ಶ್ವೇತಾ ರವೀಂದ್ರ, ಉಳ್ಳಿ ದರ್ಶನ್‌, ರೇಣುಕಯ್ಯ, ವೇದಾವತಿ, ಗೋಣಿ ರಾಮು, ಉಮೇಶ್‌ ಮಾರವಳ್ಳಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ