ಆ್ಯಪ್ನಗರ

ಸಕಾಲದಲ್ಲಿ ಸರಕಾರಿ ಸೌಲಭ್ಯ: ಸಂಗಮೇಶ್ವರ್‌

ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ಹಾಗು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್‌ ಹೇಳಿದರು.

Vijaya Karnataka 21 Jun 2019, 5:00 am
ಭದ್ರಾವತಿ: ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ಹಾಗು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್‌ ಹೇಳಿದರು.
Vijaya Karnataka Web SMR-20BDVT2


ಅವರು ಗುರುವಾರ ಹೊಸಮನೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ್ಯಾಕ್‌ ಸಮಿತಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಉಪನ್ಯಾಸಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಭಾವಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಸಿಕ್ಕರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವುದರೊಂದಿಗೆ ಪೋಷಕರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗುವ ಮೂಲಕ ನೋಂದಣಿ ಪ್ರಕ್ರಿಯೆ ಹೆಚ್ಚಾಗಲಿದೆ ಎಂದರು.

ಕಾಲೇಜು ಪ್ರಾಂಶುಪಾಲ ಡಾ.ಬಿ.ಜಿ.ಧನಂಜಯ ಕಾಲೇಜಿನ ಸಮಗ್ರ ಪ್ರಗತಿ ಹಾಗೂ ಮುಂದಿನ ಯೋಜನೆ ಕುರಿತು ಮಾಹಿತಿ ನೀಡಿದರು. ಸಮಿತಿಯ ಎಚ್‌.ಎನ್‌. ಮಹಾರುದ್ರ, ಪರಮೇಶ್ವರಪ್ಪ, ಶಿವಾಜಿರಾವ್‌, ಅಭಿದಾಲಿ, ಗೋಪಿ, ಯೋಗೇಶ್‌, ಮಂಜುನಾಥ್‌, ಜವರೇಗೌಡ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ