ಆ್ಯಪ್ನಗರ

ಮರ ಉರುಳಿ ಹೆದ್ದಾರಿ ಸಂಚಾರಕ್ಕೆ ಅಡ್ಡಿ

ಹೆದ್ದಾರಿ ಪಕ್ಕದಲ್ಲಿದ್ದ ಮರ ಅಡ್ಡಲಾಗಿ ಬಿದ್ದ ಪರಿಣಾಮ ಗುರುವಾರ ಸಂಜೆ ಸುಮಾರು 1ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ಮಾವಿನಹೊಳೆಯಲ್ಲಿ ನಡೆದಿದೆ.

Vijaya Karnataka 19 Jan 2019, 5:00 am
ಹೊಸನಗರ: ಹೆದ್ದಾರಿ ಪಕ್ಕದಲ್ಲಿದ್ದ ಮರ ಅಡ್ಡಲಾಗಿ ಬಿದ್ದ ಪರಿಣಾಮ ಗುರುವಾರ ಸಂಜೆ ಸುಮಾರು 1ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ಮಾವಿನಹೊಳೆಯಲ್ಲಿ ನಡೆದಿದೆ.
Vijaya Karnataka Web SMR-18HOSP7

ಮರ ಬಿದ್ದ ಸ್ಥಳದ ಇಕ್ಕೆಲಗಳಲ್ಲೂ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಸ್ಥಳೀಯರ ಸಹಕಾರದಿಂದ ಮರವನ್ನು ಬದಿಗೆ ಸರಿಸಿ ನಂತರ ಸಂಚಾರ ಸುಗಮಗೊಳಿಸಲಾಯಿತು.

ಸ್ಥಳಕ್ಕೆ ಬಾರದ ಅಧಿಕಾರಿಗಳು:
ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರಲಿಲ್ಲ. ಶುಕ್ರವಾರ ಸಹ ಗ್ರಾಮಸ್ಥರು, ಸ್ಥಳೀಯ ಗುತ್ತಿಗೆದಾರರ ಸಹಕಾರದೊಂದಿಗೆ ಬಿದ್ದಿದ್ದ ಮರ ತೆರವುಗೊಳಿಸಲಾಯಿತು. ಆಗಾಗ್ಗೆ ಇಂತಹ ಅವಘಡ ಸಂಭವಿಸುತ್ತಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಸ್ಪಂದಿಸುತ್ತಿಲ್ಲ. ಹೆದ್ದಾರಿ ಪಕ್ಕದಲ್ಲಿ ಕುರುಚಲು ಗಿಡಗಳು ಬೆಳೆದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಸಕಾಲದಲ್ಲಿ ತೆರವುಗೊಳಿಸದಿರುವುದು ವಾಹನ ಅಪಘಾತಗಳಿಗೆ ಆಹ್ವಾನ ನೀಡುವಂತಿದೆ. ನಿರ್ವಹಣೆಗೆ ಅನುದಾನ ಲಭ್ಯವಿದ್ದರೂ, ಕಾಮಗಾರಿ ನಡೆಯದಿರುವುದು ಅಧಿಕಾರಿಗಳನ್ನು ಸಂಶಯದಿಂದ ನೋಡುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

--------
ಹೆದ್ದಾರಿ ಅಕ್ಕ ಪಕ್ಕ ಸ್ವಚ್ಛಗೊಳಿಸುವ ಕಾರ‍್ಯವನ್ನು ಹೆದ್ದಾರಿ ಪ್ರಾಧಿಕಾರ ನಡೆಸುತ್ತಿಲ್ಲ. ಪದೇ ಪದೇ ಇಂತಹ ಘಟನೆ ಮರುಕಳಿಸುತ್ತಿವೆ. ಇನ್ನಾದರೂ ಸಂಬಂಧಪಟ್ಟವರು ಗಮನ ಹರಿಸಲಿ.
- ಸಾದಿಕ್‌ ಅಲಿ, ಗುತ್ತಿಗೆದಾರ, ಕಚ್ಚಿಗೆಬೈಲು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ