ಆ್ಯಪ್ನಗರ

ವಿಐಎಸ್‌ಎಲ್‌ ಆಸ್ಪತ್ರೆಯನ್ನು ಇಎಸ್‌ಐ ಆಸ್ಪತ್ರೆಯನ್ನಾಗಿ ಪರಿವರ್ತಿಸಿ

ನಗರದ ನ್ಯೂಟೌನ್‌ ವಿಐಎಸ್‌ಎಲ್‌ ಆಸ್ಪತ್ರೆಯನ್ನು ಇಎಸ್‌ಐ ಆಸ್ಪತ್ರೆಯಾಗಿ ಪರಿವರ್ತಿಸುವಂತೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

Vijaya Karnataka 1 Feb 2019, 5:00 am
ಭದ್ರಾವತಿ: ನಗರದ ನ್ಯೂಟೌನ್‌ ವಿಐಎಸ್‌ಎಲ್‌ ಆಸ್ಪತ್ರೆಯನ್ನು ಇಎಸ್‌ಐ ಆಸ್ಪತ್ರೆಯಾಗಿ ಪರಿವರ್ತಿಸುವಂತೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
Vijaya Karnataka Web turn visl hospital into esi hospital
ವಿಐಎಸ್‌ಎಲ್‌ ಆಸ್ಪತ್ರೆಯನ್ನು ಇಎಸ್‌ಐ ಆಸ್ಪತ್ರೆಯನ್ನಾಗಿ ಪರಿವರ್ತಿಸಿ

ನಗರದಲ್ಲಿ ಮೈಸೂರು ಕಾಗದ ಕಾರ್ಖಾನೆ ಹಾಗೂ ವಿಐಎಸ್‌ಎಲ್‌ ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ಕಾರ್ಮಿಕರು, ಸರಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರು ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಇಎಸ್‌ಐ ಕಾರ್ಡ್‌ದಾರರು ಇದ್ದಾರೆ. ಆದರೆ ಈಗ ಶಿವಮೊಗ್ಗದಲ್ಲಿ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದು, ಅದರ ಬದಲಿಗೆ ನಗರದಲ್ಲಿ ವಿಶಾಲ ಜಾಗದಲ್ಲಿ ಸುಸಜ್ಜಿತ ಕಟ್ಟಡದಲ್ಲಿರುವ ವಿಐಎಸ್‌ಎಲ್‌ ಕಾರ್ಖಾನೆ ಆಡಳಿತ ವ್ಯಾಪ್ತಿಯ ಆಸ್ಪತ್ರೆಯನ್ನು 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ