ಆ್ಯಪ್ನಗರ

ಫೆ.8, 9ಕ್ಕೆ ಮಹರ್ಷಿ ವಾಲ್ಮೀಕಿ ಗುರುಪೀಠ ವಾರ್ಷಿಕೋತ್ಸವ

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9ರಂದು ಮಹರ್ಷಿ ವಾಲ್ಮೀಕಿ ಗುರುಪೀಠದ 21ನೇ ವಾರ್ಷಿಕೋತ್ಸವ ನಡೆಯಲಿದೆ.

Vijaya Karnataka 17 Jan 2019, 5:00 am
ಶಿವಮೊಗ್ಗ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9ರಂದು ಮಹರ್ಷಿ ವಾಲ್ಮೀಕಿ ಗುರುಪೀಠದ 21ನೇ ವಾರ್ಷಿಕೋತ್ಸವ ನಡೆಯಲಿದೆ.
Vijaya Karnataka Web valmiki guru peeta annual function on february 8 9
ಫೆ.8, 9ಕ್ಕೆ ಮಹರ್ಷಿ ವಾಲ್ಮೀಕಿ ಗುರುಪೀಠ ವಾರ್ಷಿಕೋತ್ಸವ


ವಾಲ್ಮೀಕಿ ಜಾತ್ರೆ ಹೆಸರಲ್ಲಿ ನಡೆಯಲಿರುವ ಈ ವಾರ್ಷಿಕೋತ್ಸವದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿಗಳ 12ನೇ ವರ್ಷದ ಪುಣ್ಯಾರಾಧನೆ ಹಾಗೂ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ 11ನೇ ವರ್ಷದ ಪಟ್ಟಾಧಿಕಾರ ಮಹೋತ್ಸವವೂ ಜರುಗಲಿದೆ ಎಂದು ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಚ್‌.ಆರ್‌.ಹನುಮಂತಪ್ಪ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಮೂರು ಕಾರ್ಯಕ್ರಮಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ಬೇರೆ ಬೇರೆ ರಾಜ್ಯಗಳ ವಾಲ್ಮೀಕಿ ನಾಯಕ ಸಮಾಜದ ಮುಖಂಡರು, ಇತರೆ ಸಮಾಜದ ಪ್ರಮುಖರು ಆಗಮಿಸುವರು. ಜಿಲ್ಲೆಯಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಸಮಾಜ ಬಾಂಧವರು ಸೇರುವ ನಿರೀಕ್ಷೆ ಇದೆ ಎಂದರು.

ಫೆ.8ರಂದು ಜಾತ್ರೆಯ ಮೊದಲ ದಿನ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. ಫೆ.9ರಂದು ಮಹಾಸ್ವಾಮೀಜಿಯವರ 11ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಂಘದ ಪದಾಧಿಕಾರಿಗಳಾದ ರವಿಕುಮಾರ್‌, ಬಸವರಾಜ್‌, ರುದ್ರೇಶ್‌, ಲಕ್ಷ್ಮಣ್‌, ಅಶೋಕ್‌, ಟಿ.ಲಕ್ಷ್ಮಣಪ್ಪ ಹಾಗೂ ವಾಲ್ಮೀಕಿ ಗುರುಪೀಠದ ಟ್ರಸ್ಟಿ ಎಂ.ಎಸ್‌.ಬಸವರಾಜಪ್ಪ ಮತ್ತಿತರಿದ್ದರು.


ವಾಲ್ಮೀಕಿ ಸಮಾಜದ ಸಂಘಟನೆ, ಮೀಸಲು ಹೆಚ್ಚಿಸುವುದು, ರಾಜಕೀಯ ಸ್ಥಾನಮಾನಕ್ಕೆ ಅಪೇಕ್ಷೆ ಸಲ್ಲಿಸುವುದು, ಎಲ್ಲ ಸೌಲಭ್ಯಗಳನ್ನು ಸರಕಾರದಿಂದ ಪಡೆಯಲು ಪ್ರಯತ್ನಿಸುವುದು ಜಾತ್ರೆಯ ಮತ್ತೊಂದು ಭಾಗವಾಗಿದೆ. ಇದಕ್ಕಾಗಿ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು.

-ಎಚ್‌.ಆರ್‌.ಹನುಮಂತಪ್ಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ