ಆ್ಯಪ್ನಗರ

ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಜಾಥಾ

ಚುನಾವಣಾ ಆಯೋಗದಿಂದ ಯುವ ಮತದಾರರು ಮತದಾರರ ಪಟ್ಟಿಯಲ್ಲಿಹೆಸರು ನೋಂದಾಯಿಸಿಕೊಳ್ಳಬೇಕೆಂದು ಜಾಗೃತಿ ಮೂಡಿಸುವ ಜಾಥಾವು ನಗರದಲ್ಲಿಶುಕ್ರವಾರ ನಡೆಯಿತು.

Vijaya Karnataka 8 Sep 2019, 5:00 am
ಭದ್ರಾವತಿ: ಚುನಾವಣಾ ಆಯೋಗದಿಂದ ಯುವ ಮತದಾರರು ಮತದಾರರ ಪಟ್ಟಿಯಲ್ಲಿಹೆಸರು ನೋಂದಾಯಿಸಿಕೊಳ್ಳಬೇಕೆಂದು ಜಾಗೃತಿ ಮೂಡಿಸುವ ಜಾಥಾವು ನಗರದಲ್ಲಿಶುಕ್ರವಾರ ನಡೆಯಿತು.
Vijaya Karnataka Web 6BDVT2_46


ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಪೂರಕವಾಗಿ ಯುವ ಮತದಾರರು ಸ್ವಯಂ ಪ್ರೇರಿತರಾಗಿ ಮತದಾರರ ಪಟ್ಟಿಯಲ್ಲಿಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಪಟ್ಟಿಯಲ್ಲಿಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಇತ್ಯಾದಿ ಲೋಪಗಳು ಸರಿಪಡಿಸಿಕೊಳ್ಳಬೇಕೆಂದು ಜಾಥಾದಲ್ಲಿವಿದ್ಯಾರ್ಥಿಗಳು ಬ್ಯಾನರ್‌ಗಳನ್ನು ಹಿಡಿದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿನ್ಯೂಟೌನ್‌ ಸಿಲ್ವರ್‌ ಜ್ಯೂಬಲಿ ಪ್ರೌಢಶಾಲೆ, ಹಳೇ ನಗರದ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪ್ರೌಢಶಾಲೆ ವಿದ್ಯಾರ್ಥಿಗಳು ನಗರದ ವಿವಿಧ ರಸ್ತೆಗಳಲ್ಲಿಜಾಥಾ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ