ಆ್ಯಪ್ನಗರ

ಟೈರ್ ಬ್ಲಾಸ್ಟ್ : 20 ಅಡಿ ಕಂದಕಕ್ಕೆ ಉರುಳಿದ ಕಾರು

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಸುಮಾರು 20 ಅಡಿ ಕಂದಕಕ್ಕೆ ಉರುಳಿ ಬಿದ್ದಿರೋ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಕೆರೆ ಬಳಿ ಶುಕ್ರವಾರ ನಡೆದಿದೆ.

Vijaya Karnataka Web 15 Jun 2018, 3:21 pm
ತುಮಕೂರು : ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಸುಮಾರು 20 ಅಡಿ ಕಂದಕಕ್ಕೆ ಉರುಳಿ ಬಿದ್ದಿರೋ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಕೆರೆ ಬಳಿ ಶುಕ್ರವಾರ ನಡೆದಿದೆ.
Vijaya Karnataka Web car-accident


ಕಾರಿನಲ್ಲಿದ್ದ ಚನ್ನಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನರಸಿಂಹಸ್ವಾಮಿ ದೇವಾಲಯಕ್ಕೆ ತೆರಳುವಾಗ ಕಾರಿನ ಮುಂಭಾಗದ ಚಕ್ರದ ಟೈರ್ ಒಡೆದಿದೆ, ಚಾಲಕನ ನಿಯಂತ್ರಣ ತಪ್ಪಿದ ಕಾರು, ಆಯತಪ್ಪಿ ದೊಡ್ಡಗುಣಿ ಕೆರೆ ಏರಿಯಿಂದ ಕೆಳಗೆ ಬಿದ್ದಿದೆ.

ಸುಮಾರು 20ಅಡಿ ಆಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಿಂದ ಹೊರಬಂದ ವಿದ್ಯಾರ್ಥಿಗಳು ದಾರಿಯಲ್ಲಿ ಸಾಗುತ್ತಿದ್ದ ವಾಹನಗಳ ಸಹಾಯದಿಂದ ಆಸ್ಪತ್ರೆಗೆ ತೆರಳಿದ್ದಾರೆ. ಈ ಸಂಬಂಧ ಗುಬ್ಬಿ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ