ಆ್ಯಪ್ನಗರ

ನಾಳೆ ಸಿರಾಕ್ಕೆ ಸಿಎಂ

ನುಡಿದಂತೆ ನಡೆದಿದ್ದೇವೆ ಸಾಧನಾ ಸಂಭ್ರಮದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ. 28ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

Vi.Ka. Suddiloka 27 Dec 2017, 5:00 am

ತುಮಕೂರು: ನುಡಿದಂತೆ ನಡೆದಿದ್ದೇವೆ ಸಾಧನಾ ಸಂಭ್ರಮದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ. 28ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಸಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 236.50 ಕೋಟಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ಹಾಗೂ 808.47 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇಂದಿರಾ ಕ್ಯಾಂಟಿನ್‌ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ, ನಿವೇಶನ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ.

ರಾಜ್ಯ ವ್ಯಾಪ್ತಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿ. 27ರಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು ಬಳಿಕ ತುಮಕೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಡಿ. 28ರ ಗುರುವಾರ ಬೆಳಿಗ್ಗೆ 10 ಗಂಟೆಗೆ ತುಮಕೂರು ಆವರಣದಿಂದ ಹೆಲಿಕಾಪ್ಟರ್‌ ಮೂಲಕ ಸಿರಾಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10,25ಕ್ಕೆ ಸಿರಾ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಧ್ಯಾಹ್ನ 12,30ಕ್ಕೆ ಸಿರಾದಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ನಿರ್ಗಮಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಕಾಗೋಡು ತಿಮ್ಮಪ್ಪ, ಆರ್‌.ವಿ. ದೇಶಪಾಂಡೆ, ಡಿ.ಕೆ.ಶಿವಕುಮಾರ್‌, ಬಸವರಾಜರಾಯರೆಡ್ಡಿ, ಹೆಚ್‌.ಕೆ.ಪಾಟೀಲ್‌, ರೋಷನ್‌ಬೇಗ್‌, ರಾಮಲಿಂಗಾರೆಡ್ಡಿ, ಎಸ್‌.ಎಸ್‌.ಮಲ್ಲಿಕಾರ್ಜುನ, ಎ.ಮಂಜು, ಎಚ್‌.ಆಂಜನೇಯ, ಎಂ.ಕೃಷ್ಣಪ್ಪ, ಎಚ್‌.ಸಿ.ಮಹದೇವಪ್ಪ, ತನ್ವೀರ್‌ಸೇಠ್‌, ಎಚ್‌.ಎಂ.ರೇವಣ್ಣ, ಈಶ್ವರ್‌ ಖಂಡ್ರೆ, ಪ್ರಿಯಾಂಕ ಖರ್ಗೆ, ಯು.ಟಿ.ಖಾದರ್‌, ಸಂಸದರಾದ ಎಸ್‌.ಪಿ.ಮುದ್ದಹನುಮೇಗೌಡ, ಬಿ.ಎನ್‌.ಚಂದ್ರಪ್ಪ, ಜಿಪಂ ಅಧ್ಯಕ್ಷೆ ಎಂ.ಲತಾ ರವಿಕುಮಾರ್‌ ಹಾಗೂ ವಿಧಾನಸಭಾ ಸದಸ್ಯರು ಮತ್ತು ವಿಧಾನಪರಿಷತ್‌ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ