ಆ್ಯಪ್ನಗರ

ಸೆ.10ರ ಭಾರತ್ ಬಂದ್‌ಗೆ ಕಾಂಗ್ರೆಸ್ ಬೆಂಬಲ

ಸೆ.10ರ ಭಾರತ್ ಬಂದ್‌ಗೆ ಜಿಲ್ಲಾ ಕಾಂಗ್ರೆಸ್‌ ಬೆಂಬಲ ನೀಡುವುದಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ ಹೇಳಿದ್ದಾರೆ.

Vijaya Karnataka Web 8 Sep 2018, 12:48 pm
ತುಮಕೂರು: ಸೆ.10ರ ಭಾರತ್ ಬಂದ್‌ಗೆ ಜಿಲ್ಲಾ ಕಾಂಗ್ರೆಸ್‌ ಬೆಂಬಲ ನೀಡುವುದಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ ಹೇಳಿದ್ದಾರೆ.
Vijaya Karnataka Web bandh 2


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಸಾರ್ವಜನಿಕರು ನಾನಾ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಭಾರತ್ ಬಂದ್‌ಗೆ ಮುಂದಾಗಿದ್ದಾರೆ. ಜನರಿಗೆ ನೆರವಾಗುವ ದೃಷ್ಟಿಯಿಂದ ಬಂದ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಹಕಾರ ನೀಡಲಾಗುವುದು. ಉಳಿದಂತೆ ಬೀದಿಗಿಳಿದು ಹೋರಾಟ ನಡೆಸುವ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಷಫೀ‌ಅಹ್ಮದ್, ಡಾ.ರಫೀಕ್ ಅಹ್ಮದ್, ವಕ್ತಾರ ಮುರುಳೀಧರ ಹಾಲಪ್ಪ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ