ಆ್ಯಪ್ನಗರ

ಜೆಡಿಎಸ್ ಕಾರ್ಪೊರೇಟರ್ ಹತ್ಯೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಸೆ. 30ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅ.6 ರ ಶನಿವಾರ ರಾಜೇಶ್ ಅಲಿಯಾಸ್ ರಾಜಿ (30)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Vijaya Karnataka Web 6 Oct 2018, 7:27 pm
ತುಮಕೂರು: ಮಾಜಿ ಮೇಯರ್, ಜೆಡಿಎಸ್ ಕಾರ್ಪೊರೇಟರ್ ಎಚ್. ರವಿಕುಮಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜೇಶ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು, ಆತನನ್ನು ವಶಕ್ಕೆ ಪಡೆದಿದ್ದಾರೆ.
Vijaya Karnataka Web Rowdy shooted.


ಸೆ. 30ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅ.6 ರ ಶನಿವಾರ ರಾಜೇಶ್ ಅಲಿಯಾಸ್ ರಾಜಿ (30)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕೃತ್ಯಕ್ಕೆ ಬಳಸಿದ್ದ ಲಾಂಗ್ ಹಾಗೂ ಮೊಬೈಲ್ ಗಳನ್ನು ವಶಕ್ಕೆ ಪಡೆಯಲು ನಗರದ ಸಮೀಪದ ವಸಂತ ನರಸಾಪುರದ ಲಿಂಗದಹಳ್ಳಿ ಅರಣ್ಯ ಪ್ರದೇಶಕ್ಕೆ ಆರೋಪಿಯನ್ನು ಕರೆದೊಯ್ದಿದ್ದರು.

ಈ ಸಂದರ್ಭದಲ್ಲಿ ಆರೋಪಿ ರಾಜೇಶ್, ಕೋರ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್ ಅವರ ಮೇಲೆ ಕಲ್ಲು ಎತ್ತಿಹಾಕಿ, ರಿವಾಲ್ವರ್ ಕಸಿದುಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ನಗರ ಡಿಎಸ್‌ಪಿ ನಾಗರಾಜ್, ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ರಾಜೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆರೋಪಿ ರಾಜೇಶ್ ಮತ್ತು ಈತನ ದಾಳಿಯಿಂದ ಗಾಯಗೊಂಡ ಸಬ್ ಇನ್ಸ್‌ಪೆಕ್ಟರ್ ರವಿಕುಮಾರ್‌ರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ