ಆ್ಯಪ್ನಗರ

ಕೊರೊನಾ ಎಫೆಕ್ಟ್‌ ಹೆಚ್ಚಿದೆ, ಒಂದು ತಿಂಗಳ ಬ್ಯಾಂಕ್‌ ಇಎಂಐ ಮುಂದೂಡಿ, ಗ್ರಾಹಕರಿಗೆ ನೆರವಾಗಿ ಎಂದ ಡಿಕೆ ಶಿವಕುಮಾರ್

ಕೊರೊನಾ ವಿಚಾರದಲ್ಲಿ ಸರಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಉನ್ನತ ಮಟ್ಟದ ವೈದ್ಯರ ಸಭೆ ಕರೆಯಬೇಕು. ಸೇವಾ ಮನೋಭಾವದಿಂದ ಕೆಲಸ ಮಾಡಲು‌ ಖಾಸಗಿ ಅವರಿಗೆ ಸೂಚಿಸಬೇಕು ಎಂದು ಡಿಕೆಶಿ ಹೇಳಿದರು.

Vijaya Karnataka Web 19 Mar 2020, 6:43 pm
ತುಮಕೂರು: ಕೊರೊನಾ ಸೋಂಕು ತೀವ್ರತೆ ಹೆಚ್ಚುತ್ತಿದ್ದು, ಜನರನ್ನು ಕಾಪಾಡಿ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಆರೋಗ್ಯ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Vijaya Karnataka Web ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಡಿಕೆಶಿ
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಡಿಕೆಶಿ


ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಧ್ಯಮಗಳ ಜತೆ ಮಾತನಾಡಿದರು.

ಈ ವೇಳೆ ಅವರು ಹೇಳಿದ್ದಿಷ್ಟು...

ಕೊರೊನಾ ತುರ್ತು ಪರಿಸ್ಥಿತಿಯಿಂದ ಜನರು ಕಷ್ಟ ಅನುಭವಿಸುತ್ತಿದ್ದಾರೆ. ಸೋಂಕು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು 15 ದಿನಗಳ ರಜೆ 1 ತಿಂಗಳವರೆಗೂ ವಿಸ್ತರಣೆಯಾಗಬಹುದು ಎಂದರು.

ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಬ್ಯಾಂಕ್ ಗ್ರಾಹಕರಿಗೆ ಇಎಂಐ ಕಟ್ಟಲು ಕಷ್ಟವಾಗುತ್ತಿದೆ. ಒಂದು ತಿಂಗಳ ಇಎಂಐಗಳನ್ನ ಮುಂದೂಡಬೇಕು. ಜನರ ಕಷ್ಟ ಅರ್ಥ ಮಾಡಿಕೊಂಡು ಸರಕಾರ ಒಂದು ತಿಂಗಳ ಬ್ಯಾಂಕ್ ಗ್ರಾಹಕರ ಬಡ್ಡಿ ಮನ್ನಾ ಮಾಡಬೇಕು ಎಂದು ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದರು.

ಆರೋಗ್ಯ ವಿಚಾರದಲ್ಲಿ ನಾನು ರಾಜಕೀಯ ಮಾಡೋಕೆ ಹೋಗಲ್ಲಾ. ಈ ಕಷ್ಟದ ಪರಿಸ್ಥಿತಿಯಲ್ಲಿ ನಮ್ಮ ಜನಗಳನ್ನ ಉಳಿಸಿಕೊಳ್ಳೋ ಜವಾಬ್ದಾರಿ ನಮ್ಮ ಮೇಲಿದೆ.

ಕೊರೊನಾ ವಿಚಾರದಲ್ಲಿ ಸರಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಉನ್ನತ ಮಟ್ಟದ ವೈದ್ಯರ ಸಭೆ ಕರೆಯಬೇಕು. ಸೇವಾ ಮನೋಭಾವದಿಂದ ಕೆಲಸ ಮಾಡಲು‌ ಖಾಸಗಿ ಅವರಿಗೆ ಸೂಚಿಸಬೇಕು ಎಂದು ಡಿಕೆಶಿ ಹೇಳಿದರು.

ಜನರ ಅಭಿಮಾನ ಬೇಡ ಎಂದು ತಿರಸ್ಕರಿಸಲು ಆಗುವುದಿಲ್ಲ

ತಮ್ಮನ್ನು ಭೇಟಿ ಮಾಡಲು ನೂರಾರು ಕಾರ್ಯಕರ್ತರು ಆಗಮಿಸಿ ನೂಕು ನುಗ್ಗಲು ನಡೆದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, 'ನಾನು ಯಾರನ್ನು ಇಲ್ಲಿಗೆ ಬರುವಂತೆ ಹೇಳಿಲ್ಲ. ನಾನು ಬರುವ ವಿಚಾರ ತಿಳಿದು ಅವರೇ ಬಂದಿದ್ದಾರೆ. ಅಭಿಮಾನದಿಂದ ಬಂದಾಗ ಏನು ಮಾಡೋಕೆ ಆಗಲ್ಲಾ. ಅವರ ಹುರುಪು, ಉತ್ಸಾಹ ಕಡಿಮೆ ಮಾಡಲು ಆಗಲ್ಲಾ‌' ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ