ಆ್ಯಪ್ನಗರ

ಎಚ್‌ಡಿಕೆ ದೋಸ್ತಿ ಸರಕಾರದ ಗುಮಾಸ್ತ: ಮೋದಿ ಹೇಳಿಕೆಗೆ ಪರಂ ತಿರುಗೇಟು

ಕುಮಾರಸ್ವಾಮಿ ಅವರು ಸಂವಿಧಾನಾತ್ಮಕವಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಯಾಗಿದ್ದಾರೆ. ಅದರ ಅರಿವು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಇರಬೇಕು ಎಂದಿದ್ದಾರೆ.

Vijaya Karnataka Web 12 Jan 2019, 9:17 pm
ತುಮಕೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು‌ ಸಮ್ಮಿಶ್ರ ಸರ್ಕಾರದಲ್ಲಿ ‌ಕ್ಲರ್ಕ್ ತರಹ ಬಳಸಿಕೊಳ್ಳಲಾಗುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
Vijaya Karnataka Web g


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಂವಿಧಾನಾತ್ಮಕವಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಯಾಗಿದ್ದಾರೆ. ಅದರ ಅರಿವು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಇರಬೇಕು ಎಂದಿದ್ದಾರೆ.

ಫೆಡರಲ್ ಸಿಸ್ಟಮ್‌ನಲ್ಲಿ ಸಿಎಂ ಹಾಗೂ ಪಿಎಂ ಹುದ್ದೆಗಳಿಗೆ ಅದರದ್ದೆ ಆದ ಗೌರವ ಇದೆ. ಈ ಗೌರವನ್ನು ಸಂವಿಧಾನಾತ್ಮಕವಾಗಿ ನೀಡಲಾಗಿದೆ. ಈ ಬಗ್ಗೆ ಲಘುವಾಗಿ ಮಾತನಾಡಿದರೆ, ಅದು ಅವರವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.

ಬಿಜೆಪಿಯವರು ಏನು ಮಾತನಾಡುತ್ತಾರೆ ಅವರಿಗೆ ಗೊತ್ತಿರುವುದಿಲ್ಲ. ಅನೇಕ ಸಂದರ್ಭದಲ್ಲಿ ಯಾವ ಅರ್ಥದಲ್ಲಿ ಮಾತನಾಡುತ್ತಾರೆ ಎನ್ನುವುದು ಗೊತ್ತಿರುವುದಿಲ್ಲ. ಅದೇ ರೀತಿ ಪ್ರಧಾನಿಯವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎನ್ನುವುದನ್ನು ಅವರನ್ನೇ ಕೇಳಿ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದರ ಫಲಿತಾಂಶದಿಂದ ಬಿಜೆಪಿಗರಲ್ಲಿ ಮಾನಸಿಕವಾಗಿ ಗೊಂದಲ ಮೂಡಿಸಿರಬಹುದು. ಮತ್ತೆ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಭೀತಿ ಸಹ ಎದುರಾಗಿರಬಹುದು ಎಂದು ಕುಟುಕಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ