ಆ್ಯಪ್ನಗರ

ಸಾಲ ಬಾಧೆ: ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರದ ಕೋರಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

Vijaya Karnataka 12 Aug 2018, 5:00 am
ತುಮಕೂರು ಗ್ರಾಮಾಂತರ: ಸಾಲಬಾಧೆ ತಾಳಲಾರದೆ ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರದ ಕೋರಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
Vijaya Karnataka Web debt relief farmer suicide
ಸಾಲ ಬಾಧೆ: ರೈತ ಆತ್ಮಹತ್ಯೆ


ಗ್ರಾಮಾಂತರದ ಕೋರಾ ಹೋಬಳಿ ಕಾಟೇನಹಳ್ಳಿ ಗ್ರಾಮದ ರೈತ ಸಿದ್ಧರಾಮಯ್ಯ (65) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಗಿರೇನಹಳ್ಳಿಯ ಸಿಂಡಿಕೇಟ್‌ ಬ್ಯಾಂಕಿನಲ್ಲಿ 7.5 ಲಕ್ಷ , ಕೆಸ್ತೂರು ವಿಎಸ್‌ಎಸ್‌ಎನ್‌ನಲ್ಲಿ 50 ಸಾವಿರ ರೂ. ಕೃಷಿ ಸಾಲ ಹಾಗೂ ಇತರೆ ಕೈ ಸಾಲವೂ ಸೇರಿದಂತೆ 10 ಲಕ್ಷ ರೂ. ಸಾಲ ಮಾಡಿರುವುದಾಗಿ ಸ್ಥಳೀಯ ಮೂಲದಿಂದ ತಿಳಿದು ಬಂದಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಸತತ ಬರಗಾಲದಿಂದ ತತ್ತರಿಸಿರುವ ತುಮಕೂರು ತಾಲೂಕು ಕೋರಾ ಹೋಬಳಿ ಕಾಟೇನಹಳ್ಳಿಯಲ್ಲಿ ಕೃಷಿಗಾಗಿ ಸಾಲ ಮಾಡಿಕೊಂಡಿದ್ದು, ನಿರೀಕ್ಷಿಸಿದಷ್ಟು ಬೆಳೆ ಬರದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶನಿವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಗ್ರಾಮಾಂತರ ಸಿಪಿಐ ಮಧುಸೂಧನ್‌, ಕೋರಾ ಪಿಎಸ್‌ಐ ರವಿಕುಮಾರ್‌ ಸೇರಿದಂತೆ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಕೋರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ