ಆ್ಯಪ್ನಗರ

ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಸರಕಾರಿ ಸವಲತ್ತು ತಲುಪಿಸಿ: ಸೂಚನೆ

ಮಕ್ಕಳಿಗೆ ಸರಕಾರದಿಂದ ಬರುವ ಎಲ್ಲ ಸವಲತ್ತುಗಳನ್ನು ತಲುಪಿಸುವ ಕೆಲಸವನ್ನು ಹಾಸ್ಟೆಲ್‌ ವಾರ್ಡನ್‌ಗಳು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಜಿಪಂ ಉಪಾಧ್ಯಕ್ಷೆ ಶಾರದಾ ಎನ್‌.ನರಸಿಂಹಮೂರ್ತಿ ತಿಳಿಸಿದರು.

Vijaya Karnataka 27 Sep 2018, 5:00 am
ತುಮಕೂರು: ಮಕ್ಕಳಿಗೆ ಸರಕಾರದಿಂದ ಬರುವ ಎಲ್ಲ ಸವಲತ್ತುಗಳನ್ನು ತಲುಪಿಸುವ ಕೆಲಸವನ್ನು ಹಾಸ್ಟೆಲ್‌ ವಾರ್ಡನ್‌ಗಳು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಜಿಪಂ ಉಪಾಧ್ಯಕ್ಷೆ ಶಾರದಾ ಎನ್‌.ನರಸಿಂಹಮೂರ್ತಿ ತಿಳಿಸಿದರು.
Vijaya Karnataka Web deliver government privilege to hostel students
ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಸರಕಾರಿ ಸವಲತ್ತು ತಲುಪಿಸಿ: ಸೂಚನೆ


ನಗರದ ಬಿ.ಎಚ್‌.ರಸ್ತೆಯಲ್ಲಿರುವ ಸರಕಾರಿ ಮೆಟ್ರಿಕ್‌ಪೂರ್ವ ವಿದ್ಯಾರ್ಥಿನಿಯರ ನಿಲಯ, ವೃತ್ತಿಪರ ವಿದ್ಯಾರ್ಥಿನಿಯರ ನಿಲಯ, ಬಿಸಿಎಂ ಇಲಾಖೆಯಿಂದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ನಡೆಯುತ್ತಿರುವ ವೃತ್ತಿಪರ ನಾನಾ ಹಾಸ್ಟೆಲ್‌ಗಳಿಗೆ ಬುಧವಾರ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು.

ಇಡೀ ವ್ಯವಸ್ಥೆ ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಲು ದುಡಿಯುತ್ತಿದೆ. ಆದ್ದರಿಂದ ವಾರ್ಡನ್‌ಗಳು ವಿಶೇಷವಾಗಿ ಊಟದ ಸಮಯದಲ್ಲಿ ಹಾಸ್ಟೆಲ್‌ಗಳಲ್ಲಿಯೇ ಇದ್ದು, ಯಾವುದೇ ಕುಂದು ಕೊರತೆ ಬಾರದ ರೀತಿ ನೋಡಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ವೃತ್ತಿಪರ ಮತ್ತು ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗಳ ಇಬ್ಬರು ನಿಲಯ ಪಾಲಕರು ಊಟದ ಸಮಯದಲ್ಲಿ ಹಾಸ್ಟೆಲ್‌ನಲ್ಲಿ ಹಾಜರಿರಲಿಲ್ಲ. ಇವರ ವಿರುದ್ಧ ಶಿಸ್ತು ಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಜಿಪಂ ಸಿಇಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಅವರ ನಡವಳಿಕೆ ತಿದ್ದಿಕೊಳ್ಳದಿದ್ದಲ್ಲಿ ಶಿಸ್ತು ಕ್ರಮ ಜರುಗಲಾಗುವುದು ಎಂದು ಎಚ್ಚರಿಸಿದರು.

ಬಹುತೇಕ ಹಾಸ್ಟೆಲ್‌ಗಳಲ್ಲಿ ಆಹಾರ ಪದಾರ್ಥಗಳು ಪೋಲಾಗುತ್ತಿದೆ. ಮಕ್ಕಳು ಬೇಯಿಸಿದ ಆಹಾರ ಪದಾರ್ಥಗಳನ್ನು ಪೋಲು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ವೃತ್ತಿಪರ ಹಾಸ್ಟೆಲ್‌ನಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. ಇದನ್ನು ಹೋಗಲಾಡಿಸಲು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಆಗಿಂದಾಗ್ಗೆ ಹಾಸ್ಟಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ