ಆ್ಯಪ್ನಗರ

ಕಾಂಗ್ರೆಸ್‌ ಬಿಟ್ಟು ಕಮಲ ಹಿಡಿತಾರಾ ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ?

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Vijaya Karnataka Web 3 Jul 2022, 6:28 pm
ತುರುವೇಕೆರೆ : ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಮೂಲಕ ಎಂ.ಡಿ.ಲಕ್ಷ್ಮೀನಾರಾಯಣ ಅವರು ಕೈ ಪಾಳೆಯ ತೊರೆಯುವುದು ಬಹುತೇಕ ಖಚಿತ ಎನ್ನುವುದನ್ನು ಅವರ ಹೇಳಿಕೆಗಳು ಸಾಕ್ಷೀಕರಿಸುತ್ತಿವೆ.
Vijaya Karnataka Web MD Lakshminarayan


ಎಂ.ಡಿ.ಲಕ್ಷ್ಮೀನಾರಾಯಣ ಈ ಹಿಂದೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಂತರ ಬಿಎಸ್‌ವೈ ಅವರೊಂದಿಗೆ ಕೆಜೆಪಿ ಸೇರಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿದ ವೇಳೆ ಎಂ.ಡಿ.ಲಕ್ಷ್ಮೀನಾರಾಯಣ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದರು. ಕಾಂಗ್ರೆಸ್‌ ಪಕ್ಷ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸಿತ್ತು. ಮೊನ್ನೆ ನೆಡೆದ ವಿಧಾನ ಪರಿಷತ್‌ ಚುನಾವಣೆಗೆ ಎಂ.ಡಿ.ಎಲ್‌. ಆಕಾಂಕ್ಷಿಯಾಗಿದ್ದರಾದರೂ ಅವಕಾಶ ವಂಚಿತರಾದರು. ಸೇವೆಯನ್ನು ಗುರುತಿಸಲಿಲ್ಲ ಎಂದು ಬೇಸರಗೊಂಡ ಎಂ.ಡಿ.ಎಲ್‌. ಕಾಂಗ್ರೆಸ್‌ ರಾಜ್ಯ ನಾಯಕರ ವಿರುದ್ಧ ಗರಂ ಆಗಿ ಬಹಿರಂಗ ಹೇಳಿಕೆ ನೀಡಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮಾಜಿ ಶಾಸಕ ಎಂ. ಆರ್‌. ಸೀತಾರಾಮ್‌ ಅವರ ಜತೆಗೂಡಿ ಸಭೆ ನಡೆಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು.

Assembly Election 2023: ಚುನಾವಣೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಗೆದ್ದರೆ ರಾಜ್ಯವನ್ನೇ ಗೆದ್ದಂತೆ: ಡಿಕೆಶಿ

ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಎಂಡಿಎಲ್‌ ಆಕ್ರೋಶ ತಾರಕ್ಕಕ್ಕೇರಿದೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರನ್ನೂ ಹೊರತುಪಡಿಸಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್‌ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬ ಹೇಳಿಕೆ ನೀಡಿದ್ದಾರೆ. ವಿಧಾನ ಪರಿಷತ್‌ ಸ್ಥಾನ ಕೈತಪ್ಪಿದಂದಿನಿಂದ ರಾಜ್ಯ ನಾಯಕರ ವಿರುದ್ಧ ಕಿಡಿಕಾರುವುದನ್ನು ಎಂ.ಡಿ.ಎಲ್‌. ಮುಂದುವರಿಸಿದ್ದಾರೆ. ಇಷ್ಟಾದರೂ ರಾಜ್ಯ ಕಾಂಗ್ರೆಸ್‌ ನಾಯಕರು ಎಂ.ಡಿ.ಎಲ್‌. ಅವರನ್ನು ಸಮಾಧಾನಪಡಿಸುವ ಗೋಜಿಗೆ ಹೋದಂತಿಲ್ಲ. ಇದೆಲ್ಲವೂ ಇದೀಗ ಮುಗಿದ ಅಧ್ಯಾಯವಾಗಿದ್ದು, ಎಂ.ಡಿ.ಎಲ್‌. ಮತ್ತೆ ಬಿಜೆಪಿ ಸೇರುತ್ತಾರೆಂಬ ಸುದ್ದಿ ತವರು ಕ್ಷೇತ್ರ ತುರುವೇಕೆರೆಯ ರಾಜಕೀಯ ಮೊಗಸಾಲೆಗಳಲ್ಲಿ ಚರ್ಚೆಯಾಗುತ್ತಿದೆ.

ಕ್ಷೇತ್ರದ ಜನರ ಆಶಯದಂತೆ ಮುಂದಿನ ನಡೆ
ತುರುವೇಕೆರೆ ವಿಧಾನಸಭೆ ಕ್ಷೇತ್ರದ ಜನತೆ ಶಾಸಕನನ್ನಾಗಿ ಮಾಡಿದ್ದರಿಂದ ರಾಜ್ಯ ಮಟ್ಟದ ನಾಯಕನಾಗಿ ಬೆಳೆಯಲು ಸಾಧ್ಯವಾಗಿದೆ. ನನಗೆ ಬಿಜೆಪಿ ಸೇರುವಂತೆ ತವರಿನ ಹಿತೈಷಿಗಳು ಸಲಹೆ ನೀಡಿದ್ದಾರೆ. ತವರಿನಲ್ಲಿ ನಾಲ್ಕೈದು ದಿನ ಉಳಿದು ನನ್ನ ತವರು ಕ್ಷೇತ್ರದ ಕಾರ್ಯಕರ್ತರು, ಹಿತೈಷಿಗಳು ಹಾಗೂ ರಾಜ್ಯವ್ಯಾಪಿ ಇರುವ ಸಮಾಜದ ಬಂಧುಗಳೊಂದಿಗೆ ಚರ್ಚಿಸಿ ರಾಜಕೀಯ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಎಂ.ಡಿ. ಲಕ್ಷ್ಮೀನಾರಾಯಣ (ಅಣ್ಣಯ್ಯ) ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ