ಆ್ಯಪ್ನಗರ

ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾಆಲೋಚನೆ ಕೇಂದ್ರಕ್ಕಿದೆಯೇ?

ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲ ಮನ್ನಾ ಮಾಡುವ ಆಲೋಚನೆ ಕೇಂದ್ರ ಸರಕಾರಕ್ಕೆ ಇದೆಯೇ ಎಂದು ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಕೇಂದ್ರ ಸರಕಾರಕ್ಕೆ ಪ್ರಶ್ನೆ ಮಾಡಿದರು.

Vijaya Karnataka 1 Aug 2018, 5:18 pm
ತುಮಕೂರು: ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲ ಮನ್ನಾ ಮಾಡುವ ಆಲೋಚನೆ ಕೇಂದ್ರ ಸರಕಾರಕ್ಕೆ ಇದೆಯೇ ಎಂದು ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಕೇಂದ್ರ ಸರಕಾರಕ್ಕೆ ಪ್ರಶ್ನೆ ಮಾಡಿದರು.
Vijaya Karnataka Web is there center govt have decided to nationalized bank debt waiver
ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾಆಲೋಚನೆ ಕೇಂದ್ರಕ್ಕಿದೆಯೇ?


ಲೋಕಸಭೆಯಲ್ಲಿ ರೈತರ ಆತ್ಮಹತ್ಯೆ ಮತ್ತು ಸಾಲದ ಬಗ್ಗೆ ಪ್ರಶ್ನೋತ್ತರ ವೇಳೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರು ಖಾಸಗಿ ಲೇವಾದೇವಿಗಾರರ ಬಳಿ ಸಾಲ ಪಡೆಯುತ್ತಾರೆ. ರೈತರ ನೋವನ್ನು ಕೇಂದ್ರ ಸರಕಾರ ಅರ್ಥ ಮಾಡಿಕೊಳ್ಳಬೇಕು. ರೈತರ ಆತ್ಮಹತ್ಯೆ ನಿಲ್ಲಿಸಲು ಸಾಕಷ್ಟು ಕ್ರಮ ಕೈಗೊಂಡರೂ ಆತ್ಮಹತ್ಯೆ ನಿಂತಿಲ್ಲ ಎಂದರು.

ಕರ್ನಾಟಕದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸರಕಾರ 44 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದೆ. ಹಿಂದಿನ ಸಿದ್ದರಾಮಯ್ಯ ಸರಕಾರ ಎಂಟು ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿತ್ತು ಎಂದ ಅವರು, ರೈತರ ಆತ್ಮಹತ್ಯೆಗೆ ಬ್ಯಾಂಕ್‌ ಕಾರಣ. ಹೀಗಾಗಿ ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲ ಮನ್ನಾ ಮಾಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಆಲೋಚನೆ ಇದೆಯೇ? ಎಂದು ಪ್ರಶ್ನಿಸಿದರು.

ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ಸಿಂಗ್‌ ಇದಕ್ಕೆ ಉತ್ತರಿಸಿ, ಕೇಂದ್ರ ಸರಕಾರ ರೈತರ ಕಲ್ಯಾಣಕ್ಕೆ ಅನೇಕ ಕ್ರಮ ಕೈಗೊಂಡಿದೆ. ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ