ಆ್ಯಪ್ನಗರ

ಕೋರಂ ಕೊರತೆ; ನಡೆಯದ ಗ್ರಾಪಂ ಚುನಾವಣೆ

ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕುನ್ನಾಲ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಂಗಳವಾರ ಘೋಷಣೆ ಮಾಡಲಾಗಿತ್ತು. ಆದರೆ 21 ಸದಸ್ಯರಲ್ಲಿ ಕೇವಲ 6 ಸದಸ್ಯರು ಮಾತ್ರ ಹಾಜರಾಗಿದ್ದರಿಂದ ಕೋರಂ ಇಲ್ಲದ ಹಿನ್ನಲೆಯಲ್ಲಿ ಚುನಾವಣೆ ಸ್ಥಗಿತಗೊಂಡಿದ್ದು, ನ.5 ರಂದು ಸಭೆ ಕರೆಯಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್‌ ಮೋಹನಕುಮಾರ್‌ ತಿಳಿಸಿದ್ದಾರೆ.

Vijaya Karnataka 31 Oct 2018, 5:00 am
ನಿಟ್ಟೂರು (ಗುಬ್ಬಿ ತಾ): ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಕುನ್ನಾಲ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಂಗಳವಾರ ಘೋಷಣೆ ಮಾಡಲಾಗಿತ್ತು. ಆದರೆ 21 ಸದಸ್ಯರಲ್ಲಿ ಕೇವಲ 6 ಸದಸ್ಯರು ಮಾತ್ರ ಹಾಜರಾಗಿದ್ದರಿಂದ ಕೋರಂ ಇಲ್ಲದ ಹಿನ್ನಲೆಯಲ್ಲಿ ಚುನಾವಣೆ ಸ್ಥಗಿತಗೊಂಡಿದ್ದು, ನ.5 ರಂದು ಸಭೆ ಕರೆಯಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್‌ ಮೋಹನಕುಮಾರ್‌ ತಿಳಿಸಿದ್ದಾರೆ.
Vijaya Karnataka Web koram problem no election for grama panchayat
ಕೋರಂ ಕೊರತೆ; ನಡೆಯದ ಗ್ರಾಪಂ ಚುನಾವಣೆ


ಹಿಂದೆ ಇದ್ದಂತಹ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ರು ಆನಾರೋಗ್ಯ ನಿಮಿತ್ತ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ ಗೆ ಮೀಸಲಿತ್ತು. ಹಾಗಾಗಿ ಇಂದು ಅಧ್ಯಕ್ಷ ಸ್ಥಾನಕ್ಕೆ ಶೈಲಜಾ ಶಿವಯ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಖಾಜಾ ಸಾಬ್‌ ಅರ್ಜಿ ಸಲ್ಲಿಸಿದ್ದರು. ಆದರೆ ಕೋರಂ ಇಲ್ಲದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚುನಾವಣೆ ನಡೆಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ